ಸಿದ್ದಾಪುರ ಗ್ರಾಮದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಎಸ್‌ಕೆಡಿಆರ್‌ಡಿಪಿ ಬಿಸಿ ಟ್ರಸ್ಟ್ ಮತ್ತು ಸರಸ್ವತಿ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಮತ್ತು ಲಾಭಾಂಶ ವಿತರಣೆ ಕಾರ್ಯಕ್ರಮ ಉದ್ಘಾಟನೆ ವೇಳೆ ಕೂಡ್ಲಿಗಿ ತಾಲೂಕು ಯೋಜನಾಧಿಕಾರಿ ಸಂತೋಷ್, ಜ್ಞಾನವಿಕಾಸ ಸಮನ್ವಯಾಧಿಕಾರಿ ರೇಖಾ ನೀರಲಕೇರಿ, ಟಿಎನ್‌ಒ ಪ್ರಕಾಶ್ ಇತರರಿದ್ದರು. 
ಜಿಲ್ಲೆ

ಮಹಿಳೆಯರ ಸಬಲೀಕರಣಕ್ಕೆ ಆದ್ಯತೆ

ಕೂಡ್ಲಿಗಿ: ಬಡವರಿಗಾಗಿ ಜಾರಿಗೆ ತಂದಿರುವ ವಿವಿಧ ಯೋಜನೆಗಳನ್ನು ಸದುಪಯೋಗ ಪಡೆದು ಸ್ವಾವಲಂಬಿಗಳಾಗಬೇಕು ಎಂದು ಎಸ್‌ಕೆಡಿಆರ್‌ಡಿಪಿ ತಾಲೂಕು ಯೋಜನಾಧಿಕಾರಿ ಸಂತೋಷ್ ಕುಮಾರ್ ತಿಳಿಸಿದರು.

ತಾಲೂಕಿನ ಚಿಕ್ಕಜೋಗಿಹಳ್ಳಿ ವಲಯದ ಸಿದ್ದಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಮತ್ತು ಸರಸ್ವತಿ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಮತ್ತು ಲಾಭಾಂಶ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಹಿಳಾ ಸಬಲೀಕರಣಕ್ಕೆ ಬ್ಯಾಂಕ್ ಮೂಲಕ ನೇರವಾಗಿ ಸದಸ್ಯರಿಗೆ ಸಾಲ ನೀಡಿ ಸಂಘದ ಲಾಭಾಂಶ ಸಹ ಸದಸ್ಯರಿಗೆ ನೀಡುವ ಏಕೈಕ ಸಂಸ್ಥೆ ಇದಾಗಿದೆ. ಮಹಿಳೆಯರಿಗೆ ಹಣಕಾಸಿನ ಉಳಿಕೆ, ಸ್ವ ಉದ್ಯೋಗಕ್ಕೆ ಹೆಚ್ಚಿನ ಪ್ರೇರಣೆ ನೀಡಲಾಗುತ್ತದೆ ಎಂದರು. ಸಂಪನ್ಮೂಲ ವ್ಯಕ್ತಿ ಸೌಭಾಗ್ಯವತಿ ಮಾತನಾಡಿದರು. ತಾಲೂಕು ಜ್ಞಾನವಿಕಾಸ ಸಮನ್ವಯಾಧಿಕಾರಿ ರೇಖಾ ನೀರಲಕೇರಿ, ಟಿಎನ್‌ಒ ಪ್ರಕಾಶ್, ಚಿಕ್ಕಜೋಗಿಹಳ್ಳಿ ವಲಯದ ಮೇಲ್ವಿಚಾರಕಿ ರೇಣುಕಾ, ಒಕ್ಕೂಟದ ಅಧ್ಯಕ್ಷೆ ಪದ್ಮಾವತಿ, ಸೇವಾ ಪ್ರತಿನಿಧಿಗಳಾದ ವನಜಾಕ್ಷಿ, ಲಕ್ಷ್ಮೀ ಇತರರಿದ್ದರು.