ಜಿಲ್ಲೆ

ಕೂಡ್ಲೂರು ಪ್ರೌಢ ಶಾಲೆಯಲ್ಲಿ ಮಹಿಳಾ ದಿನಾಚರಣೆ

ಸುನಿಲ್ ಪೊನ್ನೇಟಿ

ಕುಶಾಲನಗರ:

ಕುಶಾಲನಗರ ಸಮೀಪದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಶನಿವಾರ ಪ್ರಾರ್ಥನಾ ಸಭಾಂಗಣದಲ್ಲಿ ಎನ್ನೆಸ್ಸೆಸ್ ಮತ್ತು ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಹಿಳಾ ದಿನವನ್ನು ಸರಳವಾಗಿ ಆಚರಿಸಲಾಯಿತು. ಮುಖ್ಯ ಶಿಕ್ಷಕ ಟಿ.ಜಿ. ಪ್ರೇಮಕುಮಾರ್, ಶಿಕ್ಷಕರಾದ ಕೆ.ಗೋಪಾಲಕೃಷ್ಣ, ದಯಾನಂದ ಪ್ರಕಾಶ್, ಬಿ.ಎನ್.ಸುಜಾತ, ಬಿ.ಡಿ.ರಮ್ಯ, ಎಸ್.ಎಂ.ಗೀತಾ, ಅನ್ಸಿಲಾ ರೇಖಾ, ಸಿಬ್ಬಂದಿ ಎಂ.ಉಷಾ ಇದ್ದರು.