ಜಿಲ್ಲೆ

ಫೆ.21ರಂದು ಕುದ್ರೋಳಿ ಗಣೇಶ್ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ

Mangaluru - Hariprasad Rai



ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಫೆ.21ರಂದು ಬೆಳಗ್ಗೆ 11.30ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ಜಾದೂಗಾರ ಕುದ್ರೋಳಿ ಗಣೇಶ್
ಭಾಗವಹಿಸಿ ಗೌರವ ಸ್ವೀಕರಿಸಲಿದ್ದಾರೆ. ನಮ್ಮ‌ಟಿ.ವಿ.ಯ ವ್ಯವಸ್ಥಾಪಕ ನಿರ್ದೇಶಕ ಡಾ.ಶಿವಶರಣ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸುವರು. ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್. ಉಪಸ್ಥಿತರಿರುವರು ಎಂದು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ