ಜಿಲ್ಲೆ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಹಾಶಿವರಾತ್ರಿ ಮಹೋತ್ಸವ

ಹರೀಶ ಎಂ.

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಹಾಶಿವರಾತ್ರಿ ಮಹೋತ್ಸವ ಭಾನುವಾರ ಆರಂಭಗೊಂಡಿದ್ದು, ಮಾ.10ರ ತನಕ ಜರುಗಲಿದೆ.


ಬೆಳಗ್ಗೆ ಗುರುಪ್ರಾರ್ಥನೆ, ಪುಣ್ಯಾಹ ಹೋಮ, ಧ್ವಜ ಪೂಜೆ, ಧ್ವಜಾರೋಹಣ, ತೈಲಾಭಿಷೇಕ, ಮಹಾಪೂಜೆ, ರಾತ್ರಿ ಬಲಿ ಉತ್ಸವ, ಶಯನೋತ್ಸವ ಜರುಗಿತು.
ಕ್ಷೇತ್ರಾಡಳಿತ ಮಂಡಳಿಯ ಅಧ್ಯಕ್ಷ ಎಚ್.ಎಸ್.ಸಾಯಿರಾಮ್, ಉಪಾಧ್ಯಕ್ಷೆ ಊರ್ಮಿಳ ರಮೇಶ್, ಕಾರ್ಯದರ್ಶಿ ಬಿ.ಮಾಧವ ಸುವರ್ಣ, ಖಜಾಂಜಿ ಪದ್ಮರಾಜ್ ಆರ್. ಮೊದಲಾದವರು ಉಪಸ್ಥಿತರಿದ್ದರು.