ಕುಕನೂರು ತಾಲೂಕಿನ ಮಂಗಳೂರು ಗ್ರಾಮ ಪಂಚಾಯಿತಿ ಆವರಣದಲ್ಲಿ ಗ್ರಾಮ ಆರೋಗ್ಯ ಕಾರ್ಯಕ್ರಮದಡಿ ಆರೋಗ್ಯ ಶಿಬಿರದಲ್ಲಿ ಜನರಿಗೆ ವೈದ್ಯರು ಆರೋಗ್ಯ ತಪಾಸಣೆ ನಡೆಸಿದರು. ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಶೇಖರಗೌಡ ಪೊಲೀಸ್, ಸಿಎಚ್‌ಒ ಸುಮಾ ಬಂಡ್ರಕಲ್ ಇತರರಿದ್ದರು. 
ಜಿಲ್ಲೆ

ಆರೋಗ್ಯದ ಕಾಳಜಿವಹಿಸುವುದು ಅಗತ್ಯ

ಕುಕನೂರು: ಪ್ರತಿಯೊಬ್ಬರು ಆರೋಗ್ಯದ ಕಾಳಜಿವಹಿಸಿಕೊಳ್ಳವುದು ಅತ್ಯಗತ್ಯ ಎಂದು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಶೇಖರಗೌಡ ಪೊಲೀಸ್ ಪಾಟೀಲ್ ಹೇಳಿದರು.

ತಾಲೂಕಿನ ಮಂಗಳೂರು ಗ್ರಾಮ ಪಂಚಾಯಿತಿ ಆವರಣದಲ್ಲಿ ಹಾಲು ಉತ್ಪಾದಕರ ಸಂಘ ಹಮ್ಮಿಕೊಂಡಿದ್ದ ಗ್ರಾಮ ಆರೋಗ್ಯ ಕಾರ್ಯಕ್ರಮದಡಿ ಆರೋಗ್ಯ ಶಿಬಿರದ ಅಧ್ಯಕ್ಷತೆ ವಹಿಸಿ ಸೋಮವಾರ ಮಾತನಾಡಿದರು. ಗ್ರಾಮ ಆರೋಗ್ಯ ಕಾರ್ಯಕ್ರಮವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಆರೋಗ್ಯ ಇಲಾಖೆಯ ಸಿಎಚ್‌ಒ ಸುಮಾ ಬಂಡ್ರಕಲ್ ಅವರು ಮಾತನಾಡಿ, ಎಲ್ಲರೂ ಪ್ರತಿದಿನ ಪೌಷ್ಟಿಕ ಆಹಾರದ ಸೇವಿಸುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದರು. ಗ್ರಾಮ ಆರೋಗ್ಯ ತಾಲೂಕು ಸಂಯೋಜಕ ಮಹಮ್ಮದ್ ರಫಿ ಮಾತನಾಡಿದರು. ಆರೋಗ್ಯ ಇಲಾಖೆ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತರು ಮತ್ತು ಆಶಾ ಕಾರ್ಯಕರ್ತರು ಇತರರಿದ್ದರು.