ಸುಬ್ರಹ್ಮಣ್ಯ: ಸುಳ್ಯ ತಾಲೂಕು ಹಾಗೂ ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಬುಧವಾರ ರಾತ್ರಿ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆಯಾಗಿದೆ. ಕುಮಾರಧಾರಾ ನದಿ ತುಂಬಿ ಹರಿಯುತ್ತಿದ್ದು, ರಾತ್ರಿ ವೇಳೆ ನದಿಯಲ್ಲಿ ನೀರಿನಮಟ್ಟ ಹೆಚ್ಚಳಗೊಂಡಿದೆ. ಸ್ನಾನಟ್ಟ ಮುಳುಗಡೆಯಾಗಿ ಲಗೇಜ್ ಕೊಠಡಿವರೆಗೆ ನದಿ ನೀರು ಆವರಿಸಿದೆ. ನದಿ ಕಿನಾರೆಗೆ ಭಕ್ತರು ತೆರಳದಂತೆ ಸೂಚಿಸಲಾಗಿದೆ. ನದಿ ದಡದಲ್ಲಿ ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿದೆ. ನದಿ ನೀರಿಗೆ ಇಳಿದು ತೀರ್ಥಸ್ನಾನ ನೆರವೇರಿಸುವುದನ್ನೂ ನಿರ್ಬಂಧಿಸಲಾಗಿದೆ.