ಜಿಲ್ಲೆ

ಕುಕ್ಕೆಯಲ್ಲಿ ರೆಗ್ಯುಲೇಟರಿ ಬಂದೋಬಸ್ತ್ : ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ಮಾಹಿತಿ

ಸೌಮ್ಯ ಆರ್

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಮಹೋತ್ಸವ ಸಂದರ್ಭ ಹೆಚ್ಚಿನ ಬಂದೋಬಸ್ತ್ ವ್ಯವಸ್ಥೆ ಮಾಡಲಾಗುತ್ತದೆ. ಲಕ್ಷ ದೀಪೋತ್ಸವ, ಚೌತಿ, ಪಂಚಮಿ ಮತ್ತು ಷಷ್ಠಿ ದಿನ ವಿಶೇಷ ಭದ್ರತೆ ಕಲ್ಪಿಸಲಾಗುತ್ತದೆ. ಕ್ಷೇತ್ರದಲ್ಲಿ ರೆಗ್ಯುಲೇಟರಿ ಬಂದೋಬಸ್ತ್ ಮಾಡಲಾಗುವುದು ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎಂ.ಎನ್. ಹೇಳಿದರು.

ಕುಕ್ಕೆ ಸುಬ್ರಹ್ಮಣ್ಯಕ್ಕೆ ಬುಧವಾರ ಭೇಟಿ ನೀಡಿ ಪೊಲೀಸ್ ಠಾಣೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಪಾರ್ಕಿಂಗ್, ವಾಹನ ದಟ್ಟಣೆ ನಿಯಂತ್ರಣಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಲಿದ್ದೇವೆ. ಪ್ರಮುಖ ದಿನಗಳಾದ ಪಂಚಮಿ ಮತ್ತು ಷಷ್ಠಿಯಂದು ವಾಹನ ಪಾರ್ಕಿಂಗ್ ಮತ್ತು ರಸ್ತೆ ಸಂಚಾರಕ್ಕೆ ವಿಶೇಷ ನಿಯಮ ಮಾಡಲಾಗುವುದು ಎಂದರು.

ಸಹಾಯಕ ವರಿಷ್ಠಾಧಿಕಾರಿ ರಾಜೇಂದ್ರ, ಡಿವೈಎಸ್‌ಪಿ ಅರುಣ್ ನಾಗೇಗೌಡ, ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ, ಸುಬ್ರಹ್ಮಣ್ಯ ಠಾಣಾ ಉಪನಿರೀಕ್ಷಕ ಕಾರ್ತಿಕ್ ಕೆ. ಉಪಸ್ಥಿತರಿದ್ದರು.

30ರಂದು ನೂತನ ಕಟ್ಟಡ ಲೋಕಾರ್ಪಣೆ

ನ.30ರಂದು ಸುಬ್ರಹ್ಮಣ್ಯದ ನೂತನ ಪೊಲೀಸ್ ಠಾಣಾ ಕಟ್ಟಡ ಗೃಹಮಂತ್ರಿಗಳಿಂದ ಉದ್ಘಾಟನೆಗೊಳ್ಳಲಿದೆ. ಕಾರ್ಯಕ್ರಮದ ಆಯೋಜನೆಗೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುವುದು ಎಂದು ಎಸ್‌ಪಿ ತಿಳಿಸಿದರು.