ಮಡಿಕೇರಿ:
ಕೊಡಗು ಜಿಲ್ಲಾ ಕುಲಾಲ (ಕುಂಬಾರ) ಮಡಿಕೆ ತಯಾರಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸೆ.14 ರಂದು ಸಂಘದ ಅಧ್ಯಕ್ಷ ಎಂ.ಡಿ.ನಾಣಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಅಂದು ಬೆಳಗ್ಗೆ 9 ಗಂಟೆಗೆ ಮಡಿಕೇರಿಯ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ನಂತರ ನಗರದ ಕೋಟೆ ಮಹಿಳಾ ಸಮಾಜದಲ್ಲಿ ಸಭೆ ಕರೆಯಲಾಗಿದೆ.
ಸಭೆಯಲ್ಲಿ 2023-24ನೇ ಸಾಲಿನ ಲೆಕ್ಕಪತ್ರ ಮಂಡನೆ ಮತ್ತು ಅನುಮೋದನೆ, ಷೇರು ಹಣ, ಹಾಗೂ ಇತರ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಎಂ.ಡಿ. ನಾಣಯ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.