ಜಿಲ್ಲೆ

ಸಹಾಯಕ ನಿರ್ದೇಶಕರಾಗಿ ಕುಮಾರ ಅಧಿಕಾರ ಸ್ವೀಕಾರ

ಆದರ್ಶ್. ಎಂ.ಕೆ.

ಮಡಿಕೇರಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಕುಮಾರ ಅವರು ಬುಧವಾರ ಅಧಿಕಾರ ವಹಿಸಿಕೊಂಡಿದ್ದಾರೆ.


ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಹೆಚ್ಚುವರಿ ಪ್ರಭಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಚಿನ್ನಸ್ವಾಮಿ ಅವರು ನಗರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿದೇಶಕರ ಕಚೇರಿಯಲ್ಲಿ ಅಧಿಕಾರ ಹಸ್ತಾಂತರಿಸಿದರು. ಕುಮಾರ ಅವರು ಈ ಹಿಂದೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬೆಂಗಳೂರಿನ ನಾಟಕ ಅಕಾಡೆಮಿಯಲ್ಲಿ ಅಧೀಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದಾರೆ.