ಜಿಲ್ಲೆ

ಕುಮಾರಲಿಂಗೇಶ್ವರ ದೇವಾಲಯ ಸ್ವಚ್ಛತೆ

ಪ್ರಸಿನ್ ಕೆ.ಆರ್

ಸೋಮವಾರಪೇಟೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಶಾಂತಳ್ಳಿ ವಲಯ ಕಾರ್ಯಕ್ಷೇತ್ರದಲ್ಲಿ ಕುಮಾರಲಿಂಗೇಶ್ವರ ದೇವಸ್ಥಾನದಲ್ಲಿ ಪರಿಸರ ಮಾಹಿತಿ ಮತ್ತು ದೇವಸ್ಥಾನದ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಮಾಜಿ ಎಂಎಲ್‌ಸಿ ಎಸ್.ಜಿ. ಮೇದಪ್ಪ ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಾಂತಳ್ಳಿ ಒಕ್ಕೂಟದ ಅಧ್ಯಕ್ಷ ಪ್ರವೀಣ್ ಕುಮಾರ್ ಪ್ರಗತಿ ಬಂಧು ಮತ್ತು ಸ್ವಸಹಾಯ ಸಂಘದ ಸದಸ್ಯರು ಹಾಗು ಗ್ರಾಮಸ್ಥರಿಗೆ ಹಣ್ಣಿನ ಸಸಿಗಳನ್ನು ವಿತರಣೆ ಮಾಡಿದರು.

ಶಾಂತಳ್ಳಿ ಕುಮಾರಲಿಂಗೇಶ್ವರ ದೇವಸ್ಥಾನದ ಧರ್ಮದರ್ಶಿ ಮಂಡಳಿ ಅಧ್ಯಕ್ಷ ಕೆ.ಎಂ.ಲೋಕೇಶ್, ದೇವಸ್ಥಾನದ ಕಾರ್ಯದರ್ಶಿ ಕೆ.ಕೆ ಮುತ್ತಣ್ಣ, ಶಾಂತಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಕೆ.ಪಿ. ಚಂಗಪ್ಪ, ಒಕ್ಕೂಟದ ಉಪಾಧ್ಯಕ್ಷ ದಿವ್ಯಕುಮಾರ್, ಮೇಲ್ವಿಚಾರಕ ಲಕ್ಷ್ಮಣ್, ಕೃಷಿ ಮೇಲ್ವಿಚಾರಕ ರಾಜಣ್ಣ, ಸೇವಾ ಪ್ರತಿನಿಧಿ ಶುಭಾವತಿ ಇತರರು ಇದ್ದರು.