ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮಕ್ಕೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಖಂಡಿಸಿ ಕುರುಬ ಸಮುದಾಯ ವತಿಯಿಂದ ಶನಿವಾರ ರಸ್ತೆ ಸಂಚಾರ ನಡೆಸಿ ಪ್ರತಿಭಟನೆ ನಡೆಸಿದರು. 
ಜಿಲ್ಲೆ

ರಸ್ತೆ ಸಂಚಾರ ತಡೆದು ಕುರುಬ ಸಮುದಾಯ ಪ್ರತಿಭಟನೆ

ವಸಂತಕುಮಾರ್ ಬಿ

ಕೆ.ಎಂ.ದೊಡ್ಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮಕ್ಕೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಖಂಡಿಸಿ ಕುರುಬ ಸಮುದಾಯ ಶನಿವಾರ ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.

ಸರ್ ಎಂ.ವಿಶ್ವೇಶ್ವರಯ್ಯ ವೃತ್ತದಲ್ಲಿ ಜಮಾವಣೆಗೊಂಡ ಪ್ರತಿಭಟನಾನಿರತರು ಕೇಂದ್ರ ಸರ್ಕಾರ ಮತ್ತು ರಾಜ್ಯಪಾಲರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾನಿರತರು ಕಾನೂನು ಕ್ರಮಕ್ಕೆ ಅವಕಾಶ ನೀಡಿರುವ ಕ್ರಮ ಖಂಡಿಸಿದರು.

ಜಿಲ್ಲಾ ಕುರುಬರ ಸಂಘದ ಸಂಘಟನಾ ಕಾರ್ಯದರ್ಶಿ ಪೂಜಾರಿ ಮಹೇಶ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನಪರ ಆಡಳಿತ ಸಹಿಸದ ಕೇಂದ್ರ ಸರ್ಕಾರ ರಾಜ್ಯಪಾಲರ ಮೂಲಕ ಕಾನೂನು ಕ್ರಮಕ್ಕೆ ಅವಕಾಶ ನೀಡಿ ಸಿದ್ದರಾಮಯ್ಯ ಅವರ ಹೆಸರಿಗೆ ಕಳಂಕ ತರಲು ಹೊರಟಿರುವ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ತಾಪಂ ಮಾಜಿ ಸದಸ್ಯ ಭರತೇಶ್ ಮಾತನಾಡಿ, ಹಿಂದುಳಿದ ವರ್ಗಗಳ ನಾಯಕ ಸಿದ್ದರಾಮಯ್ಯ ಅವರ ರಾಜಕೀಯ ಏಳಿಗೆ ಸಹಿಸದೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಆಧಾರ ರಹಿತ ಆರೋಪ ಮಾಡುತ್ತ ರಾಜ್ಯಪಾಲರ ಮೂಲಕ ಪ್ರಾಶುಕ್ಯೂಷನ್‌ಗೆ ಅವಕಾಶ ಮಾಡಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜೀಕಿಯವಾಗಿ ಮುಗಿಸಲು ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿದರು.

ಪ್ರಾಶಿಕ್ಯೂಷನ್‌ಗೆ ಅವಕಾಶ ನೀಡಿರುವ ಕ್ರಮವನ್ನು ರಾಜ್ಯಪಾಲರು ರದ್ದುಪಡಿಸಬೇಕು, ಇಲ್ಲವಾದಲ್ಲಿ ರಾಜಭವನಕ್ಕೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ಎಚ್ಚರಿಸಿದರು.

ನಿರ್ದೇಶಕ ರೇಶ್, ಮುಖಂಡರಾದ ಗುತ್ತಿಗೆದಾರ ಅಪ್ಪಾಜಿ, ರಾಜು, ದೇವರಹಳ್ಳಿ ಪುಟ್ಟರಾಜು, ಛತ್ರದ ಹೊಸಹಳ್ಳಿ ಪುಟ್ಟಸ್ವಾಮಿ, ಹುಣ್ಣನದೊಡ್ಡಿ ಜೋಗಪ್ಪ, ದೊಡ್ಡಯ್ಯ, ಬೊಪ್ಪಸಮುದ್ರ ಶಿವರಾಜು, ದೊಡ್ಡಯ್ಯ, ಕಪರೆಕೊಪ್ಪಲು ಮಲ್ಲೇಶ್ ಮತ್ತಿತರರು ಹಾಜರಿದ್ದರು.