ಜಿಲ್ಲೆ

ಕುರುಬ ಸಮಾಜ ಪ್ರತಿಭಾ ಪುರಸ್ಕಾರ 27ರಂದು

ಕೃಷ್ಣ ಕುಲಕರ್ಣಿ

ಚಿಂಚೋಳಿ: ಜಿಲ್ಲೆಯ ಕರ್ನಾಟಕ ಪ್ರದೇಶ ಕುರುಬಗೊಂಡ ಸಂಘ ಹಾಗೂ ಜಿಲ್ಲಾ ಕುರುಬಗೊಂಡ ನೌಕರರ ಸಂಘ ಸಂಯುಕ್ತಾಶ್ರಯದಲ್ಲಿ 2022/23ನೇ ಸಾಲಿನ ಪ್ರತಿಭಾ ಪುರಸ್ಕಾರ ಸಮಾರಂಭವು 27ರಂದು ಮಧ್ಯಾಹ್ನ 1ಕ್ಕೆ ಕಲಬುರಗಿಯ ಎಸ್.ಎಮ್.ಪಂಡಿತ ರಂಗಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಕುರುಬರ ಗೊಂಡ ನೌಕರರ ಸಂಘದ ಅಧ್ಯಕ್ಷ ಯಲಗೊಂಡ ಎಸ್. ಹಿರೇಕುರುಬರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನಕಗುರು ಪೀಠದ ಪೂಜ್ಯ ಸಿದ್ದರಾಮನಂದಪೂರಿ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸುವರು. ಹಿಂದುಳಿದ ಸಮುದಾಯಗಳ ಒಕ್ಕೂಟದ ರಾಜ್ಯ ಅಧ್ಯಕ್ಷ ಕೆ.ಎಂ.ರಾಮಚಂದ್ರಪ್ಪ ಕಾರ್ಯಕ್ರಮ ಉದ್ಘಾಟಿಸುವರು. ಸೇಡಂ ಸಹಾಯ ಆಯುಕ್ತ ಹಾಶಪ್ಪ ಎಸ್.ಪೂಜಾರಿ ಫೋಟೋಗಳಿಗೆ ಪೂಜೆ ಸಲ್ಲಿಸುವರು. ಸಮಾಜದ ಜಿಲ್ಲಾ ಅಧ್ಯಕ್ಷ, ನೌಕರರ ಸಂಘದ ಅಧ್ಯಕ್ಷರಾದ ಗುರುನಾಥ ಎಸ್.ಪೂಜಾರಿ, ಯಲಗೊಂಡ ಹಿರೇಕುರುಬರ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಭಗವಂತರಾವಗೌಡ ಪಾಟೀಲ, ಈರಣ್ಣ ಝಳಕಿ, ಮಲ್ಲಿಕಾರ್ಜುನ ಪೂಜಾರಿ, ಗಣಪತಿ ಮಿಣಜಗಿ, ನಿರ್ಮಾಲ ಬರಗಾಲಿ, ದೇವಿಂದ್ರಪ್ಪ ಮರತೂರ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.

ಸಮಾಜದ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸರ್ಕಾರಿ ಹುದ್ದೆಯಿಂದ ನಿವೃತ್ತಿ ಪಡೆದ ಗಣ್ಯರಿಗೆ ಗೌರವ ಸನ್ಮಾನ ಸಮಾರಂಭ ಆಯೋಜಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.