ಸಿದ್ದಮ್ಮನಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ಕೈಗೊಂಡ ಗ್ರಾವೆಲ್ ರಸ್ತೆ ಕಾಮಗಾರಿಯನ್ನು ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ ಗುರುವಾರ ವೀಕ್ಷಿಸಿದರು. ತಾಪಂ ಇಒ ಕೆ.ವಿ.ನಿರ್ಮಲಾ, ಪಿಡಿಒ ಮಲ್ಲಿಕಾರ್ಜುನ ಇದ್ದರು. 
ಜಿಲ್ಲೆ

ಕಾಮಗಾರಿಯಲ್ಲಿ ಯಾವುದೇ ಲೋಪವಾಗದಿರಲಿ

ನರೇಶ್ ಕುಮಾರ್

ಕುರುಗೋಡು: ಗ್ರಾಪಂ ಮಟ್ಟದಲ್ಲಿ ಸಿಸಿ ರಸ್ತೆ, ಚರಂಡಿ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಂಡು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ ಸೂಚಿಸಿದರು.

ಸಿದ್ದಮ್ಮನಹಳ್ಳಿ, ಗೆಣಿಕೆಹಾಳ್, ದಮ್ಮೂರು ಗ್ರಾಪಂಗಳ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ನಡೆಯುವ ಗ್ರಾವೆಲ್ ರಸ್ತೆ, ಸಿಸಿ ರಸ್ತೆ, ಚರಂಡಿ ಕಾಮಗಾರಿಗಳ ಪರಿಶೀಲಿಸಿ ಮಾತನಾಡಿದರು.

ಉದ್ಯೋಗ ಖಾತ್ರಿ ಕಾಮಗಾರಿಗಳ ಕಡತ, ಗುಣಮಟ್ಟ, ಅಳತೆ ಪರಿಶೀಲನೆ ಮಾಡಿದರು. ಕಾಮಗಾರಿಗಳಲ್ಲಿ ಯಾವುದೇ ರೀತಿಯ ಲೋಪವಾಗದಂತೆ ನಿಗಾವಹಿಸುವ ಮೂಲಕ ಪ್ರತಿಯೊಬ್ಬರಿಗೂ ಅನುಕೂಲವಾಗುವಂತೆ ಮಾಡಬೇಕು ಎಂದು ಸೂಚಿಸಿದರು. ಗ್ರಾಪಂ ಕಾರ್ಯದರ್ಶಿ ಮಲ್ಲಿಕಾರ್ಜುನ, ತಾಂತ್ರಿಕ ಸಂಯೋಜಕ ಮಲ್ಲಿಕಾರ್ಜುನ, ಐಇಸಿ ಸಂಯೋಜಕ ಚಂದ್ರಶೇಖರ ಇತರರಿದ್ದರು.