ಕುರುಗೋಡಿನ ಶ್ರೀ ದೊಡ್ಡಬಸವೇಶ್ವರ ದೇವಸ್ಥಾನದ ಮೂರ್ತಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. 
ಜಿಲ್ಲೆ

ದೊಡ್ಡಬಸವೇಶ್ವರ ಸ್ವಾಮಿಗೆ ವಿಶೇಷ ಪೂಜೆ

ಕುರುಗೋಡು: ಶ್ರಾವಣ ಮಾಸದ ಕೊನೆಯ ಸೋಮವಾರ ನಿಮಿತ್ತ ಪಟ್ಟಣದ ಆರಾಧ್ಯ ದೈವ ಶ್ರೀ ದೊಡ್ಡ ಬಸವೇಶ್ವರ ಸ್ವಾಮಿಗೆ ರುದ್ರಾಭಿಷೇಕ, ಹೂಗಳು, ಎಲೆಚಟ್ಟೆ ಅಲಂಕಾರ, ವಿಶೇಷ ಪೂಜೆ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.

ಶ್ರಾವಣದ ಕೊನೆಯ ಸೋಮವಾರ ಕಾರಣಕ್ಕೆ ಕರ್ನಾಟಕವಲ್ಲದೆ ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ ರಾಜ್ಯಗಳಿಂದಲೂ ಶ್ರೀ ಕ್ಷೇತ್ರಕ್ಕೆ ಆಗಮಿಸಿ ದೇವರ ದರ್ಶನ ಪಡೆದರು.

ದೇವಸ್ಥಾನದ ಮುಂಭಾಗದಲ್ಲಿ ಕಾಯಿ ಕರ್ಪೂರ ತೆಗೆದುಕೊಳ್ಳಲು ಭಕ್ತರಿಂದ ದೇವಸ್ಥಾನ ತುಂಬಿ ತುಳುಕಿತು.