ಕುರುಗೋಡು: ಬಾಯಿಯ ಆರೋಗ್ಯವು ಸಂಪೂರ್ಣ ದೈಹಿಕ ಸದೃಢತೆಗೆ ಪೂರಕವಾಗಿದೆ ಎಂದು ದಂತವೈದ್ಯೆ ಗಾಯತ್ರಿ ಹೇಳಿದರು.
ಪಟ್ಟಣದ ಶಾಸಕರ ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಪಂ, ಜಿಲ್ಲಾ ಆರೋಗ್ಯ ಇಲಾಖೆ ಹಾಗೂ ಸಮುದಾಯ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ವಿಶ್ವ ಬಾಯಿ ಆರೋಗ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪ್ರತಿದಿನ ಕೆಲವು ಅಭ್ಯಾಸಗಳನ್ನು ನಮ್ಮ ದಿನಚರಿಯಲ್ಲಿ ರೂಢಿಸಿಕೊಳ್ಳುವುದುರಿಂದ ಬಾಯಿಯ ಆರೋಗ್ಯ ಕಾಪಾಡಿಕೊಳ್ಳಬಹುದು. ಪ್ರತಿ ಮೂರು ತಿಂಗಳಿಗೊಮ್ಮೆ ಬ್ರಷ್ ಬದಲಿಸಿ, ದುಶ್ಚಟಗಳಿಂದ ದೂರವಿರಿ. ಇದರಿಂದ ಹಲ್ಲುಗಳು ಮತ್ತು ವಸಡು ಎರಡರ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಹೇಳಿದರು.
ನಂತರ ಮಕ್ಕಳಿಂದ ಜಾಗೃತಿ ಜಾಥಾ ನಡೆಯಿತು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬಾಯಿ ಆರೋಗ್ಯದ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು.