ಕುಷ್ಟಗಿ ತಾಲೂಕು ಆಸ್ಪತ್ರೆಗೆ ನಿಡಶೇಸಿಯ ಅಭಿನವ ಕರಿಬಸವ ಶಿವಾಚಾರ್ಯ ಸ್ವಾಮೀಜಿ ಶನಿವಾರ ಭೇಟಿ ನೀಡಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಕೆ.ಎಸ್.ರಡ್ಡಿ ಅವರಿಂದ ಜ್ವರದಿಂದ ಬಳಲುತ್ತಿರುವವರ ಮಾಹಿತಿ ಪಡೆದರು.  
ಜಿಲ್ಲೆ

ನೆರೆಬೆಂಚಿಗೆ ಕರಿಬಸವ ಶ್ರೀ ಭೇಟಿ

ಕುಷ್ಟಗಿ: ತಾಲೂಕಿನ ನೆರೆಬೆಂಚಿ ಗ್ರಾಮಕ್ಕೆ ನಿಡಶೇಸಿಯ ಅಭಿನವ ಕರಿಬಸವ ಶಿವಾಚಾರ್ಯ ಸ್ವಾಮೀಜಿ ಶನಿವಾರ ಭೇಟಿ ನೀಡಿ ಜ್ವರದಿಂದ ಬಳಲುತ್ತಿರುವವರ ಯೋಗಕ್ಷೇಮ ವಿಚಾರಿಸಿದರು.
ಗ್ರಾಮಕ್ಕೆ ಭೇಟಿ ನೀಡಿದ ವೇಳೆ ಭಕ್ತರು ನೀಡಿದ ಕಾಣಿಕೆಯನ್ನು ರೋಗಿಗಳ ಚಿಕಿತ್ಸೆಗೆಂದು ನೀಡಿ ಔದಾರ್ಯ ಮೆರೆದರು. ನಂತರ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿ ಚಿಕಿತ್ಸೆಗೆಂದು ದಾಖಲಾಗಿರುವ ರೋಗಿಗಳ ಆರೋಗ್ಯ ವಿಚಾರಿಸಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಕೆ.ಎಸ್.ರಡ್ಡಿ ಅವರಿಂದ ಮಾಹಿತಿ ಪಡೆದರು.