ಕುಷ್ಟಗಿ ತಾಲೂಕಿನ ನಿಡಶೇಸಿ ಗ್ರಾಮದ ಮುರಾರ್ಜಿ ವಸತಿ ಶಾಲೆಗೆ ಶಾಸಕ ಅಮರೇಗೌಡ ಪಾಟೀಲ್ ಬಯ್ಯಪುರ ಸೋಮವಾರ ಭೇಟಿ ನೀಡಿ ಮಕ್ಕಳೊಂದಿಗೆ ಕುಳಿತು ಉಪಹಾರ ಸೇವಿಸಿದರು. 
ಜಿಲ್ಲೆ

ವಸತಿ ಶಾಲೆ ಮಕ್ಕಳೊಂದಿಗೆ ಊಟ ಸವಿದ ಶಾಸಕ

ಕುಷ್ಟಗಿ: ತಾಲೂಕಿನ ನಿಡಶೇಸಿ ಗ್ರಾಮದ ಮುರಾರ್ಜಿ ವಸತಿ ಶಾಲೆಗೆ ಶಾಸಕ ಅಮರೇಗೌಡ ಪಾಟೀಲ್ ಬಯ್ಯಪುರ ಸೋಮವಾರ ಭೇಟಿ ನೀಡಿ ವ್ಯವಸ್ಥೆ ಪರಿಶೀಲಿಸಿ ಮಕ್ಕಳೊಂದಿಗೆ ಕುಳಿತು ಉಪಹಾರ ಸೇವಿಸಿದರು.

ಅಡುಗೆ ತಯಾರಿಸುವ ಮುನ್ನ ಧಾನ್ಯಗಳನ್ನು ಸ್ವಚ್ಛಗೊಳಿಸಬೇಕು. ಅಡುಗೆದಾರರೂ ಶುಚಿತ್ವದಿಂದ ಕೆಲಸ ಮಾಡಬೇಕು. ಗುಣಮಟ್ಟದ ಆಹಾರವನ್ನು ಮಕ್ಕಳಿಗೆ ಉಣಬಡಿಸಬೇಕು. ಮಕ್ಕಳ ಸಾಮರ್ಥ್ಯಕ್ಕನುಗುಣವಾಗಿ ಊಟ ಉಪಹಾರ ನೀಡಬೇಕು ಎಂದು ಮೇಲ್ವಿಚಾರಕರಿಗೆ ಸೂಚಿಸಿದರು. ಯಾವುದೇ ತೊಂದರೆಯಾದಲ್ಲಿ ಪತ್ರ ಅಥವಾ ಫೋನ್ ಮುಖಾಂತರ ತಿಳಿಸುವಂತೆ ವಿದ್ಯಾರ್ಥಿಗಳಿಗೆ ತಿಳಿಸಿದರು.