ಕುಷ್ಟಗಿಯಲ್ಲಿ ಸೋಮವಾರ ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರವನ್ನು ಸಹಕಾರ ಮಹಾಮಂಡಳದ ನಿರ್ದೇಶಕ ಶೇಖರಗೌಡ ಮಾಲಿಪಾಟೀಲ್ ಉದ್ಘಾಟಿಸಿದರು. ಜಿಲ್ಲಾ ಸಹಕಾರ ಯೂನಿಯನ್ ನ ಉಪಾಧ್ಯಕ್ಷ ಹಾಲಯ್ಯ ಹುಡೇಜಾಲಿ ಇತರರು ಇದ್ದರು. 
ಜಿಲ್ಲೆ

ಜವಾಬ್ದಾರಿ ಅರಿತು ಕಾರ್ಯನಿರ್ವಹಿಸಿ

ಕುಷ್ಟಗಿ: ಅಧ್ಯಕ್ಷರು ಹಾಗೂ ಸಿಇಒಗಳು ಸಂಘದ ಅಭಿವೃದ್ಧಿಗೆ ಶ್ರಮಿಸಬೇಕಿದೆ ಎಂದು ರಾಜ್ಯ ಸಹಕಾರ ಮಹಾಮಂಡಳಿಯ ನಿರ್ದೇಶಕ ಶೇಖರಗೌಡ ಮಾಲಿಪಾಟೀಲ್ ಹೇಳಿದರು.

ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಯೂನಿಯನ್, ಆರ್‌ಕೆಡಿಸಿಸಿ ಬ್ಯಾಂಕ್ ಹಾಗೂ ಸಹಕಾರ ಇಲಾಖೆಯ ಸಹಯೋಗದಲ್ಲಿ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಸಿಇಒಗಳಿಗೆ ಪಟ್ಟಣದ ಎಸ್.ಎಂ.ಭವನದಲ್ಲಿ ಸೋಮವಾರ ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಸಂಘಗಳ ಅಧ್ಯಕ್ಷರು ಹಾಗೂ ಸಿಇಒಗಳು ಕರ್ತವ್ಯ ಮತ್ತು ಜವಾಬ್ದಾರಿ ಅರಿತು ಕೆಲಸ ಮಾಡಬೇಕು. ರೈತರಿಗೆ ಸಾಲ ನೀಡುವುದರ ಜತೆಗೆ ವಸೂಲಿಯನ್ನೂ ಮಾಡಬೇಕು. ಇದರಿಂದ ರೈತರ ಜತೆ ಸಂಘಗಳು ಬೆಳೆಯಲು ಸಾಧ್ಯ ಎಂದರು.

ಕೊಪ್ಪಳ ಜಿಲ್ಲಾ ಸಹಕಾರ ಯೂನಿಯನ್ ನ ಉಪಾಧ್ಯಕ್ಷ ಹಾಲಯ್ಯ ಹುಡೇಜಾಲಿ ಮಾತನಾಡಿ, ಜಿಲ್ಲಾ ಸಹಕಾರ ಯೂನಿಯನ್ ಕಲಬುರಗಿ ವಲಯದಲ್ಲಿಯೇ ಪ್ರಥಮ ಸ್ಥಾನ ಪಡೆದುಕೊಂಡಿದೆ. ಸಹಕಾರ ಕ್ಷೇತ್ರ ಪವಿತ್ರ ಕ್ಷೇತ್ರವಾಗಿದೆ ಎಂದರು.

ಜಿಲ್ಲಾ ಯೂನಿಯನ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಕುಮಾರ್, ನಿರ್ದೇಶಕರಾದ ಡಿ.ವೆಂಕಟೇಶ, ಮಹಾಂತೇಶ ಸಜ್ಜನ್, ಪ್ರಕಾಶ, ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ಇಲಾಖೆಯ ಎಸ್.ವೀರೇಶ, ಸಹಕಾರ ಅಭಿವೃದ್ಧಿ ಅಧಿಕಾರಿ ಸ್ವಾತಿ, ಆರ್‌ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಶಿವರುದ್ರಯ್ಯ ಸ್ವಾಮಿ ಇತರರು ಇದ್ದರು.