ಬೆಟ್ಟಗೇರಿ ಗ್ರಾಮ ಪಂಚಾಯಿತಿಯ ಬಕ್ಕದ ಕೈಲುಮೂರ್ತ ಕ್ರೀಡಾ ಮಂಡಳಿ ವತಿಯಿಂದ ಪ್ರತಿ ವರ್ಷ ನಡೆಸಿಕೊಂಡು ಬರುತ್ತಿರುವ ಕೈಲುಮೂರ್ತ ಕ್ರೀಡಾಕೂಟ ಆಯೋಜನೆ ಸಂಬಂಧ ಭಾನುವಾರ ಪೂರ್ವಭಾವಿ ಸಭೆ ಏರ್ಪಡಿಸಲಾಗಿತ್ತು. 
ಜಿಲ್ಲೆ

29ರಂದು ಕೈಲ್ ಮುಹೂರ್ತ ಕ್ರೀಡಾಕೂಟ

ವಸಂತಕುಮಾರ್ ಬಿ

ನಾಪೋಕ್ಲು: ಇಲ್ಲಿಗೆ ಸಮೀಪದ ಬೆಟ್ಟಗೇರಿ ಗ್ರಾಮ ಪಂಚಾಯಿತಿಯ ಬಕ್ಕದ ಕೈಲು ಮುಹೂರ್ತ ಕ್ರೀಡಾ ಮಂಡಳಿ ವತಿಯಿಂದ ಪ್ರತಿ ವರ್ಷ ನಡೆಸಿಕೊಂಡು ಬರುತ್ತಿರುವ ಕೈಲ್ ಮುಹೂರ್ತ ಕ್ರೀಡಾಕೂಟವನ್ನು 29ರಂದು ಆಯೋಜಿಸುವ ಸಂಬಂಧ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.

ಬಕ್ಕದನಲ್ಲಿ ಭಾನುವಾರ ಕ್ರೀಡಾ ಮಂಡಳಿ ಅಧ್ಯಕ್ಷ ಬೈತಡ್ಕ ದೇವಯ್ಯ ಅವರ ಅಧ್ಯಕ್ಷತೆಯಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ, 18ನೇ ವರ್ಷದ ಕೈಲ್ ಮುಹೂರ್ತ ಕ್ರೀಡಾಕೂಟವನ್ನು ಸೆ.29ರಂದು ಭಾನುವಾರ ಬೆಳಗ್ಗೆ 10 ಗಂಟೆಗೆ ತೆಂಗಿನಕಾಯಿಗೆ ಗುಂಡು ಹೊಡೆಯುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಗುವುದು. ಕ್ರೀಡಾಕೂಟದಲ್ಲಿ ಕಿರಿಯರಿಂದ ವಯಸ್ಕರವರೆಗೂ ವಿವಿಧ ಆಟೋಟ ಸ್ಪರ್ಧೆಗಳು, ಸಾಧಕರಿಗೆ ಸನ್ಮಾನ, ಸಮಾರೋಪ ಸಮಾರಂಭ, ಬಹುಮಾನ ವಿತರಣೆ ಕಾರ್ಯಕ್ರಮ ನಡೆಸುವ ಬಗ್ಗೆ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಯಿತು.

ಸಭೆಯಲ್ಲಿ ಹಿರಿಯರಾದ ಹೊಸೊಕ್ಲು ಮೊಣ್ಣಪ್ಪ , ನೈಯ್ಯಣಿ ಹೇಮಕುಮಾರ್, ಹೊಸೊಕ್ಲು ಕಿಶೋರ್, ಯಶೋದ, ಪುದಿಯನೆರವನ ವೆಂಕಟೇಶ್, ಸದ, ಅರುಣ, ನೈಯ್ಯಣಿ ಶಾರದಾ, ಶಾಂತಿ, ಉಮೇಶ್ ನೆಯ್ಯಣಿ, ಸೂದನ ಸುಜಿ , ಕುಂಜಿಲನ ಲೋಕನಾಥ್, ಬಾಡನ ಸತೀಶ್, ಕಡ್ಲೇರ ತುಳಸಿ ಮೋಹನ್ , ಸ್ಥಳೀಯ ಸ್ವಸಹಾಯ ಸಂಘಗಳು, ಸ್ತ್ರೀಶಕ್ತಿ ಸಂಘ, ಗಜಾನನ ಯುವಕ ಮಂಡಳಿಯ ಅಧ್ಯಕ್ಷರು ಪದಾಧಿಕಾರಿಗಳು ಸೇರಿದಂತೆ ಇತರರು ಭಾಗವಹಿಸಿದ್ದರು.