ಮಡಿಕೇರಿ:
ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ಕೊಡಗು ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಎಲ್. ಅನಂತರಾವ್ ನೇಮಕಗೊಂಡಿದ್ದಾರೆ. ಕೇಂದ್ರ ಕಚೇರಿ ಬೆಂಗಳೂರಿನಲ್ಲಿ ಪರಿಷತ್ ರಾಜ್ಯಾಧ್ಯಕ್ಷ ಎಸ್. ಸುರೇಶ್ ರಾವ್ ಸಾಠೆ ಮತ್ತು ಪ್ರಧಾನ ಕಾರ್ಯದರ್ಶಿ ಟಿ.ಆರ್. ಸುನೀಲ್ ಚವ್ಹಾಣ್ ಅವರು ಅನಂತರಾವ್ ಅವರಿಗೆ ನೇಮಕಾತಿ ಪತ್ರ ನೀಡಿದರು.
ಈ ಸಂದರ್ಭ ಸಲಹೆಗಾರ ವಿಠ್ಠಲ ರಾವ್ ಗಾಯಕ್ವಾಡ್, ವ್ಯವಸ್ಥಾಪಕÀ ಶ್ರೀನಿವಾಸ ಮಗರ್ ಮತ್ತಿತರರು ಉಪಸ್ಥಿತರಿದ್ದರು.