ದೇವದುರ್ಗ: ಹಟ್ಟಿಚಿನ್ನದಗಣಿ ಕಂಪನಿಯಲ್ಲಿ ಮೆಡಿಕಲ್ ಅನ್‌ಫಿಟ್ ಆಧಾರದಲ್ಲಿ ಕಾರ್ಮಿಕರ ಮಕ್ಕಳಿಗೆ ಉದ್ಯೋಗಾವಕಾಶ ನೀಡಲು ಸರ್ಕಾರದ ಮೇಲೆ ಒತ್ತಡ ಹಾಕುವಂತೆ ಶಾಸಕ ಕೆ.ಶಿವನಗೌಡ ನಾಯಕಗೆ ಗಣಿ ಸಿಬ್ಬಂದಿ ಮತ್ತು ಕಾರ್ಮಿಕರ ಸಂಘದ ಪ್ರಮುಖರು ಪಟ್ಟಣದಲ್ಲಿ ಗುರುವಾರ ಮನವಿ ಸಲ್ಲಿಸಿದರು.
ಕಾರ್ಮಿಕರಿಗೆ ರಕ್ಷಣಾ ಸಾಮಗ್ರಿ ಸೇರಿ ಇತರ ಅಗತ್ಯ ಸೌಲಭ್ಯ ಕಲ್ಪಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿಯೊಂದಿಗೆ ಮಾತನಾಡಿ ಒತ್ತಡ ಹಾಕುವಂತೆ ಮನವಿ ಮಾಡಿದರು. ಶಾಸಕ ಕೆ.ಶಿವನಗೌಡ ನಾಯಕ ಮಾತನಾಡಿ, ಗಣಿ ಕಂಪನಿ ಸಿಬ್ಬಂದಿ ಮತ್ತು ಕಾರ್ಮಿಕರ ಧ್ವನಿಯಾಗಿರುತ್ತೇನೆ. ನಿಮ್ಮ ಬೇಡಿಕೆಗಳನ್ನು ಸಂಬಂಧಿಸಿದವರ ಗಮನಕ್ಕೆ ತಂದು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ಗಣಿ ಕಾರ್ಮಿಕರು ನಿಮ್ಮ ಮೇಲೆ ಭರವಸೆಯಿಟ್ಟು ಚುನಾವಣೆಯಲ್ಲಿ ಗೆಲ್ಲಿಸಿದ್ದಾರೆ. ಅವರ ಅಭಿವೃದ್ಧಿಗೆ ಕಾರ್ಯನಿರ್ವಹಿಸುವ ಮೂಲಕ ಭರವಸೆ ಉಳಿಸಿಕೊಳ್ಳಬೇಕು ಎಂದು ಸಂಘದ ಪದಾಧಿಕಾರಿಗಳಿಗೆ ಶಿವನಗೌಡ ನಾಯಕ ಕಿವಿಮಾತು ಹೇಳಿದರು.