ಜಿಲ್ಲೆ

ಮರ ಕಡಿಯುವ ವೇಳೆ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಸಾವು

mahalakshmihm

ಕೊಡಗು: ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅರ್ಜಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಪಣಿಯರವರ ತೋಲ(38) ಮೃತ ದುರ್ದೈವಿ. ಕಾಫಿ ತೋಟದಲ್ಲಿ ಮರ ಕಡಿಯುತ್ತಿದ್ದ ವೇಳೆ ಅಲ್ಲೇ ಇದ್ದ ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದಾನೆ. ಈ ಬಗ್ಗೆ ವಿರಾಜಪೇಟೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.