ಹುಬ್ಬಳ್ಳಿ: ಮುಡಾ ಪ್ರಕರಣಕ್ಕೆ ಸಂಬಂಧಿಸಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು, ನಂತರದ ಬೆಳವಣಿಗೆಗಳು ಸೇರಿ ರಾಜ್ಯಪಾಲರ ವಿರುದ್ಧ ಮುಖ್ಯಮಂತ್ರಿಯವರು ದೂರು ನೀಡಿದರೆ ತಪ್ಪೇನು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಪ್ರಶ್ನಿಸಿದರು.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರ ವಿರುದ್ಧ ರಾಜಕೀಯ ಅಷ್ಟೇ ಅಲ್ಲ ಕಾನೂನಾತ್ಮಕ ಹೋರಾಟವನ್ನೂ ಸಿಎಂ ಸಿದ್ದರಾಮಯ್ಯ ಅವರು ಮುಂದುವರಿಸಲಿದ್ದಾರೆ. ಬಿಜೆಪಿಯವರು ರಾಜಕಾರಣ ಮಾಡಿದರೆ ನಮಗೂ ರಾಜಕೀಯ ಮಾಡಲು ಬರುತ್ತದೆ ಎಂದು ತಿರುಗೇಟು ನೀಡಿದರು.