ಜಿಲ್ಲೆ

ಭೀಕರ ಅಪಘಾತಕ್ಕೆ ಮಹಿಳೆ ಬಲಿ; ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಪ್ಯಾಸೆಂಜರ್ ವಾಹನ ಜಖಂ

ನೆಲಮಂಗಲ: ಲಾರಿಯೊಂದು ಪ್ಯಾಸೆಂಜರ್ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಮಹಿಳೆಯೊಬ್ಬರು ಗಂಭೀರ ಗಾಯಕ್ಕೊಳಗಾಗಿ ಸಾವಿಗೀಡಾಗಿದ್ದಾರೆ. ಮಾತ್ರವಲ್ಲ, ಇನ್ನೂ ನಾಲ್ಕೈದು ಮಂದಿಗೆ ಗಾಯಗಳಾಗಿವೆ.

ನೆಲಮಂಗಲದ ದಾಬಸ್ ಪೇಟೆ ಬಳಿಯ ಲಾರಿಯೊಂದು ಪ್ಯಾಸೆಂಜರ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಪ್ಯಾಸೆಂಜರ್​ ವಾಹನ ಜಖಂಗೊಂಡಿದ್ದು, ಅದರಲ್ಲಿದ್ದ ಗುಬ್ಬಿ ಮೂಲದ ರಾಧಾ (35) ಗಂಭೀರವಾಗಿ ಗಾಯಗೊಂಡಿದ್ದರು.

ಗಾಯಾಳುವನ್ನು ತಕ್ಷಣ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ರಾಧಾ ಜತೆಗಿದ್ದ ಇತರ ನಾಲ್ಕೈದು ಮಂದಿಗೂ ಸಣ್ಣಪುಟ್ಟ ಗಾಯಗಳಾಗಿವೆ. ನೆಲಮಂಗಲ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.