ಗಂಗಾವತಿ ತಾಲೂಕಿನ ಸಂಗಾಪುರದ ಶ್ರೀ ಲಕ್ಷ್ಮೀನಾರಾಯಣ ಕೆರೆಯನ್ನು ಪ್ರವಾಸಿ ತಾಣವನ್ನಾಗಿ ರೂಪಿಸುವಂತೆ ಒತ್ತಾಯಿಸಿ ಚಾರಣ ಬಳಗದ ಸದಸ್ಯರು ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಶನಿವಾರ ಮನವಿ ಸಲ್ಲಿಸಿದರು. ಸಂಚಾಲಕ ಡಾ.ಶಿವಕುಮಾರ ಮಾಲಿ ಪಾಟೀಲ್, ವಿವಿಧ ಸಂಘಟನೆ ಪದಾಧಿಕಾರಿಗಳಾದ ಡಿ.ಕಮರ್ ಪಾಷಾ, ಹುಲ್ಲೇಶಪ್ಪ, ನರಸಪ್ಪ, ವಲಿಸಾಬ್ ಇತರರಿದ್ದರು. 
ಜಿಲ್ಲೆ

ಕೆರೆ ವಿಸ್ತೃತ ಯೋಜನೆ ತಯಾರಿಸಿ

Kopala - Desk - Eraveni

ಗಂಗಾವತಿ; ತಾಲೂಕಿನ ಸಂಗಾಪುರದ ಶ್ರೀ ಲಕ್ಷ್ಮೀನಾರಾಯಣ ಕೆರೆಯನ್ನು ಅಭಿವೃದ್ಧಿ ಜತೆಗೆ ಪ್ರವಾಸಿ ತಾಣವನ್ನಾಗಿ ರೂಪಿಸುವಂತೆ ಒತ್ತಾಯಿಸಿ ಚಾರಣ ಬಳಗದ ಸದಸ್ಯರು ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಶನಿವಾರ ಮನವಿ ಸಲ್ಲಿಸಿದರು.

ಚಾರಣ ಬಳಗದ ಸಂಚಾಲಕ ಡಾ.ಶಿವಕುಮಾರ ಮಾಲಿ ಪಾಟೀಲ್ ಮಾತನಾಡಿ, ಕೆರೆಯಲ್ಲಿ ಮುಳ್ಳುಗಂಟಿಗಳು ಬೆಳೆದು ಹೂಳು ತುಂಬಿದೆ. ನೀರು ಸಂಗ್ರಹ ಪ್ರಮಾಣ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ.

ಕೆರೆ ಸ್ವಚ್ಛಗೊಳಿಸಿದರೆ ಸಾವಿರಾರು ಎಕರೆ ಪ್ರದೇಶದ ಭೂಮಿಗೆ ನೀರು ದೊರೆಯುತ್ತದೆ. ಪ್ರಾಣಿ, ಪಕ್ಷಿಗಳಿಗೆ ಅನುಕೂಲವಾಗಲಿದ್ದು, ಸುತ್ತಲಿನ ಪ್ರದೇಶದ ಅಂತರ್ಜಲ ಹೆಚ್ಚಾಗಲಿದೆ. ಕೆರೆ ಸುಂದರೀಕರಣದ ಜತೆಗೆ ಬೋಟಿಂಗ್ ವ್ಯವಸ್ಥೆ ಕಲ್ಪಿಸಿ ಪ್ರವಾಸಿ ತಾಣವನ್ನಾಗಿ ಪರಿವರ್ತಿಸಬೇಕಿದೆ.

ಕೆರೆ ವೀಕ್ಷಿಸಿ ವಿಸ್ತೃತ ಯೋಜನೆ ತಯಾರಿಸುವಂತೆ ಒತ್ತಾಯಿಸಿದರು. ವಿವಿಧ ಸಂಘಟನೆ ಪದಾಧಿಕಾರಿಗಳಾದ ಅಣ್ಣಪ್ಪ, ವೀರೇಶ ಸುಳೇಕಲ್, ವೀರೇಶ ಬಲಕುಂದಿ, ಪ್ರಲ್ಹಾದ್ ಕುಲಕರ್ಣಿ, ಜಗದೀಶ ಮಾಲಿಪಾಟೀಲ್ ಇತರರಿದ್ದರು.