ಬಂಕಾಪುರ: ಮದ್ಯ ಸೇವನೆ ಚಟದಿಂದ ಮಾನಸಿಕ ಅಸ್ವಸ್ಥನಾಗಿದ್ದ ವ್ಯಕ್ತಿಯೊಬ್ಬ ಕೆರೆಯಲ್ಲಿ ಬಿದ್ದು ಮೃತಪಟ್ಟ ಘಟನೆ ಇಲ್ಲಿಗೆ ಸಮೀಪದ ತೋರುರು ಗ್ರಾಮದಲ್ಲಿ ಸೋಮವಾರ ನಡೆದಿದೆ.
ಗ್ರಾಮದ ಪುಟ್ಟೇಶ ಶಂಕ್ರಪ್ಪ ಜವಳಿ (26) ಮೃತ ವ್ಯಕ್ತಿ.
ಈತ ವಿಪರೀತ ಮದ್ಯ ಸೇವನೆ ಮಾಡುತ್ತಿದ್ದ. ಇದರಿಂದ ಮಾನಸಿಕ ಅಸ್ವಸ್ಥನಾಗಿದ್ದ. ಹೀಗಾಗಿ ಗ್ರಾಮದ ಅಗಸನಕಟ್ಟಿ ಕೆರೆಯಲ್ಲಿ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.