ಜಿಲ್ಲೆ

ಮಹಿಳೆಯ ಜೀವ ಉಳಿಸಿದ ಸಂಚಾರಿ ಪೊಲೀಸ್

ಮಂಜುನಾಥ ಕೋಳಿಗುಡ್ಡ


ಬೆಳಗಾವಿ: ಇಲ್ಲಿನ ಅಶೋಕ ವೃತ್ತದ ಬಳಿಯಿರುವ ಕೋಟೆ ಕೆರೆಯಲ್ಲಿ ಕಾಲು ಜಾರಿಬಿದ್ದು ಮುಳುಗುತ್ತಿದ್ದ ಮಹಿಳೆಯನ್ನು ಸಂಚಾರಿ ಪೊಲೀಸ್ ಸಿಬ್ಬಂದಿ ರಕ್ಷಿಸುವ ಮೂಲಕ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ.
ನಗರದ ಕೋಟೆ ಕೆರೆಯ ಸುತ್ತವಿರುವ ಕಾಲುದಾರಿಯಲ್ಲಿ ನಡೆದುಕೊಂಡು ಹೋಗುತ್ತಿರುವ ಸಂದರ್ಭದಲ್ಲಿ ಮಳೆಯಿಂದ ತಪ್ಪಿಸಿಕೊಳ್ಳಲು ಹೋಗಿ ಕಾಲು ಜಾರಿ ಕೆರೆಯಲ್ಲಿ ಬಿದ್ದು  ಮಹಿಳೆ ಮುಳುಗುತ್ತಿರುವುದನ್ನು ಗಮನಿಸಿದ ಉತ್ತರ ಸಂಚಾರಿ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಕಾಶಿನಾಥ ಈರಗಾರ್ ಅವರು ತಮ್ಮ ಜೀವವನ್ನು  ಲೆಕ್ಕಿಸದೆ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ.ಕೆರೆಯಲ್ಲಿ ಮುಳುಗುತ್ತಿರುವ ಮಹಿಳೆಯ ಪ್ರಾಣ ರಕ್ಷಿಸಿದ ಪೊಲೀಸ್ ಕಾನ್ಸ್ಟೇಬಲ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ.