ಜಿಲ್ಲೆ

ವಿಜೃಂಭಣೆಯ ಲಕ್ಷ ದೀಪೋತ್ಸವ

Mysuru

ಮೈಸೂರು: ಮಕರ ಸಂಕ್ರಾಂತಿ ಪ್ರಯುಕ್ತ ಶಬರಿಮಲೆ ಶ್ರೀ ಅಯ್ಯಪ್ಪ ಪೂಜಾ ಸಮಿತಿಯಿಂದ ಚಾಮುಂಡಿಬೆಟ್ಟದ ತಪ್ಪಲಿನ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ಲಕ್ಷ ದೀಪೋತ್ಸವ ವಿಜೃಂಭಣೆಯಿಂದ ನಡೆಯಿತು.

ನೂರಾರು ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಮಾಡಿ ದೀಪ ಹಚ್ಚಿದರು. ಸಂಜೆ ದೇವಸ್ಥಾನ ಆವರಣ ಹಣತೆಗಳ ಬೆಳಕಿನಲ್ಲಿ ಕಂಗೊಳಿಸಿತು. ಮಕರ ಸಂಕ್ರಾಂತಿ ಪ್ರಯುಕ್ತ ದೇವಸ್ಥಾನದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆಯಿತು.