ಲಕ್ಷ್ಮೇಶ್ವರ: ತಾಲೂಕು ವೈದ್ಯರ ಸಂಘದ ಉದ್ಘಾಟನೆ ಮತ್ತು ಪದಗ್ರಹಣ ಸಮಾರಂಭ ಫೆ.4ರಂದು ಬೆಳಿಗ್ಗೆ 10ಗಂಟೆಗೆ ಪಟ್ಟಣದ ಶ್ರೀ ವೀರಗಂಗಾಧರ ಸಮುದಾಯ ಭವನದಲ್ಲಿ ನೆರವೇರಲಿದೆ. ತಾಲೂಕು ವೈದ್ಯರ ಸಂಘದ ಅಧ್ಯಕ್ಷ ಡಾ.ಪಿ.ಡಿ. ತೋಟದ ಅಧ್ಯಕ್ಷತೆ ವಹಿಸುವರು. ಶಾಸಕ ಡಾ. ಚಂದ್ರು ಲಮಾಣಿ ಉದ್ಘಾಟಿಸುವರು. ಹುಬ್ಬಳ್ಳಿಯ ಡಾ.ಮಹೇಶ ನಾಲ್ವಾಡ, ತಾಲೂಕು ವೈದ್ಯಾಧಿಕಾರಿ ಡಾ. ಸುಭಾಸ ದಾಯಗೊಂಡ, ಮಾಜಿ ಶಾಸಕರಾದ ಜಿ.ಎಂ. ಮಹಾಂತಶೆಟ್ಟರ, ಜಿ.ಎಸ್. ಗಡ್ಡದೇವರಮಠ, ಡಾ. ಎಸ್.ಸಿ. ಮಲ್ಲಾಡದ ಸೇರಿ ವೈದ್ಯರ ಸಂಘದ ಸದಸ್ಯರು ಉಪಸ್ಥಿತರಿರುವರು. ಇದೇ ಸಂದರ್ಭದಲ್ಲಿ ಬೆಳಿಗ್ಗೆ 10ರಿಂದ ಮಧ್ಯಾಹ್ನ 2ಗಂಟೆವರೆಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ವೈದ್ಯರ ಸಂಘದ ಕಾರ್ಯದರ್ಶಿ ಡಾ.ವಿನೋದ ಹೊನ್ನಿಕೊಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.