ಜಿಲ್ಲೆ

ಗ್ಯಾರಂಟಿಗಳು ವಿಳಂಬವಾಗುವುದಿಲ್ಲ, ವಿಪಕ್ಷದವರು ತಾಳ್ಮೆಯಿಂದಿರಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​

Webdesk - Manjunatha B

ಬೆಳಗಾವಿ: ವಿಧಾನಸಭೆ ಚುನಾವಣೆ ವೇಳೆ ಮತದಾರರಿಗೆ ಕಾಂಗ್ರೆಸ್​ ಪಕ್ಷವು ಅಧಿಕಾರಕ್ಕೆ ಬಂದಲ್ಲಿ ಮೊದಲ ಸಚಿವ ಸಂಪುಟ ಸಭೆಯಲ್ಲಿ ಐದು ಗ್ಯಾರಂಟಿಗಳನ್ನು ಜಾರಿಗೆ ತರಲಾಗುವುದು ಎಂದು ಆಶ್ವಾಸನೆ ನೀಡಿತ್ತು.

ಈಗಾಗಲೇ ಗ್ಯಾರಂಟಿಗಳ ಅನುಷ್ಠಾನದ ವಿಚಾರವಾಗಿ ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿರುವ ಬೆನ್ನಲ್ಲೇ ಆಶ್ವಾಸನೆಗಳ ಜಾರಿ ವಿಳಂಬವಾಗುವುದಿಲ್ಲ ತುಸು ತಾಳ್ಮೆಯಿಂದಿರಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಹೇಳಿದ್ದಾರೆ.

ತಾಳ್ಮೆಯಿಂದಿರಿ

ಈ ಕುರಿತು ಬೆಳಗಾವಿಯಲ್ಲಿ ಮಾತನಾಡಿದ ಲಕ್ಷ್ಮೀ ಮಹಿಳೆಯರಿಗೆ ಉಚಿತ ಪ್ರಯಾಣ ಸೇರಿದಂತೆ ಜನತೆಗೆ ಆಶ್ವಾಸನೆ ನೀಡಿರುವ ಎಲ್ಲಾ ಗ್ಯಾರಂಟಿಗಳನ್ನು ಜರಿಗೆ ತರುತ್ತೇವೆ ವಿಪಕ್ಷದವರು ತುಸು ತಾಳ್ಮೆಯಿಂದಿರಬೇಕು ಎಂದಿದ್ದಾರೆ.

ಚುನಾವಣೆ ಸಮಯದಲ್ಲಿ ಕಾಂಗ್ರೆಸ್​ ಪಕ್ಷ ನೀಡಿದ್ದ ಎಲ್ಲಾ ಭರವಸೆಗಳನ್ನು ಹಂತ ಹಂತವಾಗಿ ಈಡೇರಿಸುತ್ತೇವೆ. ಈಗಾಗಲೇ ಇದರ ಕುರಿತಾಗಿ ಸಿದ್ದತೆಗಳು ಸಹ ಆರಂಭವಾಗಿವೆ ತುಸು ಸಮಯ ಹಿಡಿಯುತ್ತದೆ. ಹಾಗೆಂದು ಜನರನ್ನು ತುಂಬಾ ದಿನ ಕಾಯುಸುವುದಿಲ್ಲ ಎಂದು ತಿಳಿಸಿದ್ದಾರೆ.

ನಂಬಿಸಿ ಕೈ ಕೊಟ್ಟಿದ್ದಾರೆ

ಬಿಜೆಪಿಯವರು ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ. ಹಾಕುತ್ತೇವೆ ಎಂದು ಹೇಳಿ ಜನರಿಗೆ ನಂಬಿಸಿ ಕೈ ಕೊಟ್ಟಿದ್ದಾರೆ. ನಾವು ಹಾಗಲ್ಲ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ ತೀರ ವಿಳಂಬ ಮಾಡದೆ ಯೋಜನೆಗಳನ್ನು ಜಾರಿ ಮಾಡುತ್ತೇವೆ.

ನನಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಜವಾಬ್ದಾರಿ ಸಿಕ್ಕಿದ್ದು ತುಂಬಾ ಖುಷಿ ನೀಡಿದೆ. ಒಳ್ಳೆಯ ಕೆಲಸ ಮಾಡಲು ಸಾಕಷ್ಟು ಅವಕಾಶಗಳಿವೆ ಎಲ್ಲಾ ಬಳಸಿಕೊಂಡು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.