ಬೆಂಗಳೂರು: Lakshmi Hebbalkar car accident ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದ ಬಳಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತೆರಳುತ್ತಿದ್ದ ಕಾರು ಅಪಘಾತಕ್ಕಿಡಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣದಲ್ಲಿ ಅಪರಿಚಿತ ಕಂಟೇನರ್ ಟ್ರಕ್ ವಿರುದ್ಧ ದೂರು ದಾಖಲಿಸಲಾಗಿದೆ. ಸರ್ಕಾರಿ ಕಾರು ಡ್ರೈವರ್, ಹಿಟ್ & ರನ್ ಕೇಸ್ ದಾಖಲಿಸಿದ್ದಾರೆ.
ಸಚಿವೆಯ ಕಾರನ್ನು ಚಲಾಯಿಸುತ್ತಿದ್ದ ಚಾಲಕ ಶಿವಪ್ರಸಾದ್ ಅವರು ಕಿತ್ತೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಮುಂದೆ ಸಾಗುತ್ತಿದ್ದ ಟ್ರಕ್ ಏಕಾಏಕಿ ಎಡಬದಿಗೆ ಬಂದು ಕಾರನ್ನು ತಾಗಿಸಿದ ಪರಿಣಾಮ ಈ ಅಪಘಾತವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಬೆಳಗಾವಿ ಜಿಲ್ಲೆ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ನಿನ್ನೆ ಬೆಳಗ್ಗೆ 5 ಗಂಟೆಗೆ ಕಾರು ಅಪಘಾತ ಸಂಭವಿಸಿತ್ತು.
ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬೆನ್ನಿಗೆ ಬಲವಾದ ಪೆಟ್ಟಾಗಿದೆ. ಇವರ ಬೆನ್ನಿನ ಎಲ್1 ಮತ್ತು ಎಲ್4 ಫ್ರಾಕ್ಚರ್ ಆಗಿರುವುದು ಧೃಡವಾಗಿದೆ. ಪೇನ್ ಕಿಲ್ಲರ್ ಕೊಟ್ಟ ಟ್ರೀಟ್ಮೆಂಟ್ ಮುಂದುವರಿಸಿದ್ದೇವೆ. ಈಗ ಸುಧಾರಿಸಿದ್ದು, ಇನ್ನೂ 2 ದಿನ ಚಿಕಿತ್ಸೆ ನೀಡಿ ಡಿಶ್ಚಾರ್ಜ್ ಮಾಡುತ್ತೇವೆ. ಹೆಬ್ಬಾಳ್ಕರ್ ಅವರು ಕನಿಷ್ಠ 1 ತಿಂಗಳು ಬೆಡ್ ರೆಸ್ಟ್ ಮಾಡಬೇಕು ಎಂದರು ಡಾ. ರವಿ ಪಾಟೀಲರು ಖಾಸಗಿವಾಹಿನಿಗೆ ತಿಳಿಸಿದ್ದಾರೆ.
ನಾನು ಸಚಿವರ ಸರ್ಕಾರಿ ಕಾರು ಚಲಾಯಿಸುತ್ತಿದ್ದೆ. ಕಾರಿನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಎಂಎಲ್‌ಸಿ ಚನ್ನರಾಜ್ ಹಟ್ಟಿಹೊಳಿ, ಸಚಿವರ ಅಂಗರಕ್ಷಕ ಈರಪ್ಪ ಹುಣಶಿಕಟ್ಟಿ ಇದ್ದರು. ಬೆಂಗಳೂರಿನಿಂದ ಬೆಳಗಾವಿಗೆ ಹೊರಟ್ಟಿದ್ದೆವು. ಕಿತ್ತೂರು ತಾಲೂಕಿನ ಅಂಬಡಗಟ್ಟಿ ಕ್ರಾಸ್ ಬಳಿಯ ಧಾರವಾಡ-ಬೆಳಗಾವಿ ಮಧ್ಯದ ರಾಷ್ಟ್ರೀಯ ಹೆದ್ದಾರಿ 48ರ ಮೇಲಿದ್ದೆವು. ನಮ್ಮ ಮುಂದೆ ಲೈನ್ 1 ರಲ್ಲಿ ಹೋಗುತ್ತಿದ್ದ ಕಂಟೇನರ್ ಟ್ರಕ್ ಚಾಲಕ ಯಾವುದೇ ಮುನ್ಸೂಚನೆ ಕೊಡದೇ ಎಡಬದಿಗೆ ಬಂದ. ಆಗ ಎಡಬದಿಗೆ ತೆಗೆದುಕೊಂಡರೂ ಟ್ರಕ್ ಚಾಲಕ ಕಾರಿನ ಬಲ ಬದಿಗೆ ತಾಗಿಸಿದ. ಕಾರು ನಿಯಂತ್ರಣ ತಪ್ಪಿ ಸರ್ವೀಸ್ ರಸ್ತೆಯಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದವರಿಗೆ ಸಣ್ಣ, ಗಂಭೀರ ಗಾಯಗಳಾಗಿವೆ. ಅಪಘಾತ ಮಾಡಿ ವಾಹನ ನಿಲ್ಲಿಸದೇ ಲಾರಿ ಡ್ರೈವರ್ ಹೋಗಿದ್ದಾನೆ ಎಂದು ದೂರು ದಾಖಲಿಸಲಾಗಿದೆ.
ದೂರಿನಲ್ಲಿ ಏನಿದೆ?