ಜಿಲ್ಲೆ

ಏ.4ರಂದು ನಗರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ: ಟ್ರಸ್ಟ್‌ನ ಅಧ್ಯಕ್ಷೆ ಎಸ್.ಎಲ್.ಉಮಾದೇವಿ ಮಾಹಿತಿ

ಮಂಡ್ಯ: ಡಾ.ಬಿ.ಟಿ.ಲಲಿತಾ ನಾಯಕ್ ಎಜುಕೇಷನಲ್ ಆ್ಯಂಡ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಡಾ.ಬಿ.ಟಿ.ಲಲಿತಾ ನಾಯಕ್ ಫೌಂಡೇಷನ್ ಸಹಯೋಗದೊಂದಿಗೆ ಏ.4ರಂದು ನಗರದಲ್ಲಿ ಮಾನವತಾ ಪ್ರಶಸ್ತಿ ಪ್ರದಾನ ಹಾಗೂ ಸಾಮೂಹಿಕ ಸರಳ ಮದುವೆ ಸಮಾರಂಭ ಆಯೋಜಿಸಲಾಗಿದೆ ಎಂದು ಟ್ರಸ್ಟ್‌ನ ಅಧ್ಯಕ್ಷೆ ಎಸ್.ಎಲ್.ಉಮಾದೇವಿ ಹೇಳಿದರು.

ಡಾ.ಬಿ.ಟಿ.ಲಲಿತಾ ನಾಯಕ್ ಬಡಾವಣೆಯ ಸಮುದಾಯ ಭವನದಲ್ಲಿ ಅಂದು ಬೆಳಗ್ಗೆ 10ಗಂಟೆಗೆ ಹಮ್ಮಿಕೊಂಡಿರುವ ಸಮಾರಂಭವನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಉದ್ಘಾಟಿಸಲಿದ್ದು, ರವಿಕುಮಾರ್‌ಗೌಡ ಅಧ್ಯಕ್ಷತೆ ವಹಿಸುವರು. ಶಾಸಕ ಪಿ.ಎಂ.ನರೇಂದ್ರಸ್ವಾಮಿ ಪ್ರದಾನ ಮಾಡುವರು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷ ಡಾ.ಎ.ಆರ್.ಗೋವಿಂದಸ್ವಾಮಿ ‘ಬಂಜಾರ ಸಮುದಾಯದ ಅಭಿವೃದ್ಧಿಗೆ ಶ್ರಮಿಸಿದ ಮಹನೀಯರ’ ಕುರಿತು, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಎನ್.ಜಯದೇವನಾಯಕ್ ‘ಮದುವೆಯ ನೋಂದಣಿ ಪ್ರಾಮುಖ್ಯತೆ’ ಹಾಗೂ ಸಮತಾ ಸೈನಿಕ ದಳದ ಡಾ.ಎಂ.ವೆಂಕಟಸ್ವಾಮಿ, ಡಾ.ಸಿ.ರವೀಂದ್ರನಾಥ್ ಅವರು ಡಾ.ಬಿ.ಟಿ.ಲಲಿತಾನಾಯಕ್ ಕುರಿತು ವಿಷಯ ಮಂಡನೆ ಮಾಡಲಿದ್ದಾರೆ. ಇದೇ ವೇಳೆ ಐದು ಜೋಡಿಗೆ ಸರಳ ಸಾಮೂಹಿಕ ವಿವಾಹ ನಡೆಯಲಿದೆ ಎಂದು ವಿವರಿಸಿದರು.

ಟ್ರಸ್ಟ್‌ನ ಗೌರವಾಧ್ಯಕ್ಷೆ ಡಾ.ಬಿ.ಟಿ.ಲಲಿತಾನಾಯಕ್, ಖಜಾಂಚಿ ಓಂಪ್ರಕಾಶ್, ಹನುಮಂತರಾಮ್‌ನಾಯಕ್, ಎಸ್.ಎಂ.ಪುಟ್ಟಸ್ವಾಮಿ, ಶೀನಾನಾಯಕ್ ಇದ್ದರು.