ಜಿಲ್ಲೆ

ಮಗುವಿಗೆ ಲ್ಯಾಪ್ರೋಸ್ಕೋಪಿಕ್ ಅಪೆಂಡಿಸೈಟಿಸ್ ಶಸ್ತ್ರಚಿಕಿತ್ಸೆ : ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸಾಧನೆ

ಸೌಮ್ಯ ಆರ್

ಬೆಳ್ತಂಗಡಿ: ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅಪೆಂಡಿಸೈಟಿಸ್ ಸಮಸ್ಯೆ ಇದ್ದ 9 ವರ್ಷ ಪ್ರಾಯದ ಮಗುವಿಗೆ ಲ್ಯಾಪ್ರೋಸ್ಕೋಪಿಕ್ ಅಪೆಂಡಿಸೈಟಿಸ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಯಿತು.

ಶಸ್ತ್ರಚಿಕಿತ್ಸಾ ತಜ್ಞ ಡಾ.ಕಿರಣ್ ಹಾಗೂ ಅರಿವಳಿಕೆ ತಜ್ಞ ಡಾ.ಸುಪ್ರಿತ್ ಆರ್.ಶೆಟ್ಟಿ ತಂಡ ಶಸ್ತ್ರಚಿಕಿತ್ಸೆ ನಡೆಸಿತು. ಶಸ್ತ್ರಚಿಕಿತ್ಸೆಗೆ ಒಳಗಾದ ಮಗು ಕಡಿಮೆ ಅವಧಿಯಲ್ಲಿ ಚೇತರಿಸಿಕೊಂಡಿದ್ದು, ಡಿಸ್ಚಾರ್ಜ್ ಆಗಿದೆ.

ಲ್ಯಾಪ್ರೋಸ್ಕೋಪಿಕ್ ಶಸ್ತ್ರಚಿಕಿತ್ಸೆಯಲ್ಲಿ ಅತಿ ಚಿಕ್ಕ ಗಾಯವಾಗುವುದರಿಂದ ರೋಗಿ ಬಹಳ ಬೇಗನೇ ಚೇತರಿಸಿಕೊಳ್ಳುತ್ತಾರೆ. ಈ ಶಸ್ತ್ರಚಿಕಿತ್ಸೆಯಲ್ಲಿ ಕಡಿಮೆ ನೋವು, ಕಡಿಮೆ ರಕ್ತಸ್ರಾವ ಹಾಗೂ ಸೋಂಕಿನ ಅಪಾಯ ತುಂಬಾ ಕಡಿಮೆ ಇರುತ್ತದೆ. ಕ್ಲಿಷ್ಟಕರ ಶಸ್ತ್ರಚಿಕಿತ್ಸೆಗಳು ಕೂಡ ಉಜಿರೆಯ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಡೆಸಲಾಗುತ್ತಿದೆ. ನಗರದ ಹೈಟೆಕ್ ಆಸ್ಪತ್ರೆಗಳಲ್ಲಿ ದುಬಾರಿಯಾಗಿರುವ ಶಸ್ತ್ರಚಿಕಿತ್ಸೆಗಳನ್ನು ಇಲ್ಲಿ ಅತ್ಯಂತ ಕಡಿಮೆ ದರದಲ್ಲಿ ಮಾಡಲಾಗುತ್ತಿದೆ. ಯಶಸ್ವಿ ಶಸ್ತ್ರಚಿಕಿತ್ಸೆಗಳ ಬಗ್ಗೆ ಡಾ.ಡಿ.ವೀರೇಂದ್ರ ಹೆಗ್ಗಡೆ, ಹೇಮಾವತಿ ವೀ.ಹೆಗ್ಗಡೆ ಹಾಗೂ ಡಿ.ಹರ್ಷೇಂದ್ರ ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ವ್ಯವಸ್ಥಾಪಕ ನಿರ್ದೇಶಕ ಎಂ.ಜನಾರ್ದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.