ಜಿಲ್ಲೆ

ಶಿಕ್ಷಣದಿಂದ ಉತ್ತಮ ಭವಿಷ್ಯ ಸಾಧ್ಯ

ಶಿವರಾಜ.ಎಂ

 ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ

ಶಿಕ್ಷಣವೇ ಶಕ್ತಿ, ಶಿಕ್ಷಣ ಒಂದು ದೇಶದ ಅಭಿವೃದ್ಧಿಯ ಸೂಚಕವಾಗಿದೆ ಹಾಗೆಯೇ ವಿದ್ಯಾರ್ಥಿಗಳ ಭವ್ಯ ಭವಿಷ್ಯಕ್ಕೆ ಭದ್ರ ಬುನಾದಿಯಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಹೇಳಿದರು.

ದೇವನಹಳ್ಳಿಯ ಜಿಲ್ಲಾಡಳಿತಭವನದಲ್ಲಿ ಸೋಮವಾರ ಸಾರ್ವಜನಿಕ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕಳೆದ 2023-24 ನೇ ಸಾಲಿನಲ್ಲಿ ಎಸೆಸೆಲ್ಸಿಯಲ್ಲಿ ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿ ಮಾತನಾಡಿದರು. ಸರ್ಕಾರ ಶಿಕ್ಷಣಕ್ಕೆ ಆದ್ಯತೆ ನೀಡಿದೆ, ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಣಕ್ಕಾಗಿಯೇ ಹಲವು ಯೋಜನೆಗಳನ್ನು ರೂಪಿಸಿದೆ ಇವುಗಳನ್ನು ಸದ್ಭಳಕೆ ಮಾಡಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಎಸ್ಸೆಸ್ಸೆಲ್ಸಿ ಎನ್ನುವುದು ಪ್ರತಿ ವಿದ್ಯಾರ್ಥಿಯ ಜೀವನದ ಪ್ರಮುಖ ಘಟ್ಟವಾಗಿರುತ್ತದೆ ಇದನ್ನು ಯಶಸ್ವಿಯಾಗಿ ಪೂರೈಸಿದರೆ ಭವಿಷ್ಯದಲ್ಲಿ ಯಶಸ್ಸು ಕಟ್ಟಿಟ್ಟಬುತ್ತಿ ಎಂದು ಹೇಳಿದರು.

ಲ್ಯಾಪ್‌ಟಾಪ್ ಪಡೆದ ವಿದ್ಯಾರ್ಥಿಗಳು: ನೆಲಮಂಗಲ ತಾಲೂಕಿನ ಚಿನ್ಮಯಿ, ದೊಡ್ಡಬಳ್ಳಾಪುರ ದೀಕ್ಷಾ, ರಾಧಾ, ದೇವನಹಳ್ಳಿ ಎಂ.ನಿಧಿ, ಬಿ.ಮಿತುನ್, ಆರ್.ಕಾರ್ತಿಕ್, ದೊಡ್ಡಬಳ್ಳಾಪುರ ತಾಲೂಕಿನ ತೇೀಜಸ್ವಿನಿ,ಎ.ಜೀವನ್, ಶಶಿಕಿರಣ್

ಹೊಸಕೋಟೆಯ ತೇಜಶ್ರೀ, ಶ್ರೀಕೀರ್ತಿ, ಮೀನಾಕ್ಷಿ ಪ್ರದೀಪ್, ಕೆ.ಸಂಜನಾ, ಹಂಸವೇಣಿ, ವಿ. ಹೇಮಾ ಮತ್ತಿತರ ವಿದ್ಯಾರ್ಥಿಗಳು ಲ್ಯಾಪ್‌ಟಾಪ್ ಪಡೆದರು.