ಜಿಲ್ಲೆ

ಹೆಚ್ಚು ಅಂಕ ಪಡೆದ ೨೪ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ

reportermys

ಮಡಿಕೇರಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ೧೩ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದಲ್ಲಿ ಅತೀ ಹೆಚ್ಚು ಅಂಕ ಪಡೆದ ೨೪ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪುಟ್ಟರಾಜುರವರು ವಿತರಿಸಿದರು.


ನಗರದ ಜೂನಿಯರ್ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಲ್ಯಾಪ್‌ಟಾಪ್ ವಿತರಿಸಿ ಮಾತನಾಡಿ, ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು ಜ್ಞಾನ ಹೆಚ್ಚಿಸಿಕೊಳ್ಳುವುದರ ಜತೆಗೆ ಉದ್ಯೋಗ ಪಡೆಯುವಂತಾಗಬೇಕು. ಸಮಯವನ್ನು ವ್ಯರ್ಥ ಮಾಡದೆ ಇರುವ ಕಾಲಾವಕಾಶವನ್ನು ಸರಿಯಾಗಿ ಬಳಸಿಕೊಂಡು ಗುಣಮಟ್ಟದ ಶಿಕ್ಷಣ ಪಡೆಯುವಂತಾಗಬೇಕು ಎಂದು ಹೇಳಿದರು.


ಕಳೆದ ೨೦೨೨ ರ ಏಪ್ರಿಲ್‌ನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಲಾಯಿತು. ಪ್ರಾಂಶುಪಾಲರಾದ ಪಿ.ಎಂ.ವಿಜಯ, ಶಿಕ್ಷಕಿಯರಾದ ದೇವಕಿ, ಪುರುಷೋತ್ತಮ, ಸಿದ್ದರಾಜು ಬೆಳ್ಳಯ್ಯ ಇತರರು ಇದ್ದರು.