ಜಿಲ್ಲೆ

ಲಾರ್ವ ಉತ್ಪತ್ತಿ ಹೊಂದಿರುವ ಪ್ರದೇಶದ ಮಾಲೀಕರಿಗೆ ದಂಡ -ಮನಪಾ ಆಯುಕ್ತ ಸಿ.ಎಲ್. ಆನಂದ್ ಸೂಚನೆ

Mangaluru - Hariprasad Rai



ಮಂಗಳೂರು : ದ.ಕ. ಜಿಲ್ಲೆಯಲ್ಲಿ ಡೆಂೆ ರೋಗದ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಡೆಂೆ ರೋಗಕ್ಕೆ ಕಾರಣವಾಗುವ ಲಾರ್ವಗಳನ್ನು ನಾಶಗೊಳಿಸಬೇಕು ಎಂದು ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಸಿ.ಎಲ್. ಆನಂದ್ ತಿಳಿಸಿದರು.
ಸೋಮವಾರ ಮಹಾನಗರಪಾಲಿಕೆ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಡೆಂೆ ನಿರ್ಮೂಲನೆ ಹಾಗೂ ಕೈಗೊಂಡ ಕ್ರಮಗಳ ಕುರಿತ ಸಭೆಯಲ್ಲಿ ಮಾತನಾಡಿದರು.
ಪಾಲಿಕೆ ವ್ಯಾಪ್ತಿಯಲ್ಲಿ ರೋಗ ಪತ್ತೆಯಾದ ಪ್ರದೇಶದಲ್ಲಿ ಇರುವ ಪ್ರತಿ ಮನೆಗಳಿಗೆ ಹಾಗೂ ಕಟ್ಟಡಗಳಲ್ಲಿ ಲಾರ್ವ
ಉತ್ಪತ್ತಿಯಾಗುವ ಪ್ರದೇಶವನ್ನು ಗುರುತಿಸಿ ಪ್ರತಿನಿತ್ಯವೂ ರಾಸಾಯನಿಕ ಸಿಂಪಡನೆ ಮಾಡಬೇಕು . ಸುತ್ತಮುತ್ತಲು ಫಾಗಿಂಗ್ ಮಾಡಬೇಕು ಎಂದು ಸೂಚಿಸಿದರು.
ಡೆಂಗೆ ಪತ್ತೆಯಾದ ದಿನವೇ ರೋಗಿಯ ಮನೆಯ ಸುತ್ತಮುತ್ತ ಲಾರ್ವ ಉತ್ಪತ್ತಿಯನ್ನು ಗುರುತಿಸಿ ಸಿಂಪಡಣೆ ನಡೆಸಬೇಕು. ಪಾಲಿಕೆಯ ವ್ಯಾಪ್ತಿಯಲ್ಲಿ ಸಿಂಪಡಣೆಯನ್ನು ಕೈಗೊಳ್ಳುವ ದಿನದ ಬಗ್ಗೆ ವೇಳಾಪಟ್ಟಿಯನ್ನು ತಯಾರಿಸಿ ಆಯಾ ಪ್ರದೇಶದ ಜನರಿಗೆ
ಮಾಹಿತಿ ಒದಗಿಸಬೇಕು ಎಂದರು.
ಜನರಿಗೆ ಡೆಂೆ ಬಗ್ಗೆ ಜಾಗೃತಿ ಮೂಡಿಸಬೇಕು. ನಗರದಲ್ಲಿ ಲಾರ್ವಗಳು ಕಂಡು ಬರುವ ವಾಸ್ತವ್ಯದ ಕಟ್ಟಡಕ್ಕೆ 500 ರೂ., ವಾಣಿಜ್ಯ ಕಟ್ಟಡಕ್ಕೆ 500 ರೂ., ನಿರ್ಮಾಣ ಹಂತದಲ್ಲಿರುವ ಕಟ್ಟಡಕ್ಕೆ 15,000 ರೂ., ಬಹುಮಹಡಿ ವಾಸ್ತವ್ಯದ ಕಟ್ಟಡ 5,000 ರೂ.ಕಟ್ಟಡಗಳ ಮಾಲೀಕರ ಮೇಲೆ ಕ್ರಮ ತೆಗೆದುಕೊಂಡು ದಂಡ ವಿಧಿಸಲಾಗುತ್ತದೆ ಎಂದು ಅವರು ಹೇಳಿದರು.
ಜಿಲ್ಲಾ ರೋಗವಾಹಕ ಮತ್ತು ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ನವೀನ್‌ಚಂದ್ರ ಕುಲಾಲ್ ಅವರು ಡೆಂೆ ರೋಗದ ನಿರ್ಮೂಲನೆಗೆ ತೆಗೆದುಕೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ರಾಜೇಶ್ ಬಿ.ವಿ, ವಿಶ್ವ ಆರೋಗ್ಯ ಸಂಸ್ಥೆಯ ಸರ್ವಲೆನ್ಸ್ ಮೆಡಿಕಲ್ ಆಫೀಸರ್ ಡಾ. ಹರ್ಷಿತ್, ತಾಲೂಕು ಆರೋಗ್ಯ ಅಧಿಕಾರಿ ಡಾ. ಸುಜಯ್, ಮಂಗಳೂರು ಮಹಾನಗರ ಆರೋಗ್ಯ ಅಧಿಕಾರಿ ಡಾ. ಮಂಜಯ್ಯ ಶೆಟ್ಟಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೈಲಾ ಉಪಸ್ಥಿತರಿದ್ದರು.