ಜಿಲ್ಲೆ

ವಿದ್ಯಾರ್ಥಿಗಳೇ ಗಮನಿಸಿ: ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆ ನೋಂದಣಿಗೆ ಕಡೇ ದಿನಾಂಕ ವಿಸ್ತರಣೆ

ಬೆಂಗಳೂರು: ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳು ನೋಂದಣಿ ಮಾಡಿಕೊಳ್ಳಲು ಮತ್ತು ಉತ್ತರ ಪತ್ರಿಕೆಗಳ ಸ್ಕ್ಯಾನ್​ ಪ್ರತಿ ಪಡೆಯುವ ಅವಧಿಯನ್ನು ಮೇ 18ರವರೆಗೆ ವಿಸ್ತರಿಸಲಾಗಿದೆ.

ಸ್ಕ್ಯಾನ್​ ಪ್ರತಿ ಪಡೆಯಲು ಮೇ 14 ಮತ್ತು ಪೂರಕ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಲು ಮೇ 15 ಕೊನೆಯ ದಿನವಾಗಿತ್ತು. ಅಭ್ಯರ್ಥಿಗಳು ಹಾಗೂ ಪಾಲಕರ ಒತ್ತಾಯದ ಮೇರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ದೇಶಕರು ತಿಳಿಸಿದ್ದಾರೆ.