ದಾವಣಗೆರೆ: ದಿವಂಗತ ನಟ ವಿಷ್ಣುವರ್ಧನ್ ಅವರ ಅಭಿಮಾನಿಯೋರ್ವ ನೇಣಿಗೆ ಶರಣಾಗಿರುವ ಘಟನೆ ದಾವಣಗೆರೆಯಲ್ಲಿ ಗುರುವಾರ ರಾತ್ರಿ ನಡೆದಿದೆ.
ಲೋಕೇಶ್ (50) ಮೃತ ದುರ್ದೈವಿ. ಯಾರು ಇಲ್ಲದ ವೇಳೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ದಾವಣಗೆರೆ ಪಿ.ಬಿ. ರಸ್ತೆ ಭರತ್ ಡಾಬಾ ಬಳಿಯ ಬೀಡಾ ಅಂಗಡಿ ಮಾಲೀಕರಾಗಿದ್ದ ಲೋಕೇಶ್, ಪ್ರತಿ ವರ್ಷ ವಿಷ್ಣು ಬರ್ತಡೇಯನ್ನು ವಿಶಿಷ್ಟವಾಗಿ ಆಚರಿಸುತ್ತಿದ್ದರು. ದಾವಣಗೆರೆಯಲ್ಲಿ ಬಹುತೇಕರಿಗೆ ಚಿರಪರಿಚಿತರಾಗಿದ್ದರು.
ಆತ್ಮಹತ್ಯೆಗೆ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ದಾವಣಗೆರೆ ಕೆಟಿಜೆ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್)