ಬಂಟ್ವಾಳ: ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ಆಶ್ರಯದಲ್ಲಿ ಜ.19ರಂದು ನಡೆಯಲಿರುವ ಬಂಟ್ವಾಳ ತಾಲೂಕುಮಟ್ಟದ ಕೋಟಿ-ಚೆನ್ನಯ ಕ್ರೀಡೋತ್ಸವದ ಲಾಂಛನ ಬಿಡುಗಡೆ ಬಿ.ಸಿ.ರೋಡಿನಲ್ಲಿ ಭಾನುವಾರ ನಡೆಯಿತು. ಕುದ್ರೋಳಿ ಗೋಕರ್ಣ ದೇವಸ್ಥಾನದ ಟ್ರಸ್ಟಿ, ಉದ್ಯಮಿ ಜಗದೀಪ್ ಸುವರ್ಣ ಲಾಂಛನ, ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.
ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಕೋಟಿ-ಚೆನ್ನಯ ಕ್ರೀಡೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಪೂಜಾರಿ ಮೆಲ್ಕಾರ್ ಕ್ರೀಡಾಕೂಟದ ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾಗಿ ಮಾಜಿ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ, ರಾಮಪ್ಪ ಪೂಜಾರಿ, ಚಂದ್ರಶೇಖರ ಪೂಜಾರಿ, ಮಹಿಳಾ ಘಟಕದ ಅಧ್ಯಕ್ಷೆ ಶೈಲಜಾ ರಾಜೇಶ್ ಭಾಗವಹಿಸಿದ್ದರು.
ಪ್ರಮುಖರಾದ ಕೆ.ಸಂಜೀವ ಪೂಜಾರಿ, ಭುವನೇಶ್ ಪಚ್ಚಿನಡ್ಕ, ವಿಶ್ವನಾಥ ಬಿ, ಆನಂದ ಸಾಲ್ಯಾನ್, ರಾಜೇಶ್ ಸುವರ್ಣ, ಐತಪ್ಪ ಪೂಜಾರಿ, ವೀರೇಂದ್ರ ಅಮೀನ್, ಪ್ರೇಮನಾಥ್ ಕರ್ಕೇರ, ರಮೇಶ್ ಅನ್ನಪ್ಪಾಡಿ, ಬಾಲಕೃಷ್ಣ ಅಂಚನ್, ಗಣೇಶ್ ಪೂಂಜರಕೋಡಿ, ಪ್ರಶಾಂತ್ ಕೋಟ್ಯಾನ್, ಗಿರೀಶ್ ಪೆರ್ವ, ಹರೀಶ್ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.
ಕ್ರೀಡೋತ್ಸವ ಸಮಿತಿ ಸಂಚಾಲಕ ಬೇಬಿ ಕುಂದರ್ ಸ್ವಾಗತಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ್ ತುಂಬೆ ವಂದಿಸಿದರು. ಬಂಟ್ವಾಳ ಯುವವಾಹಿನಿಯ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರೂಪಿಸಿದರು.