ಹನೂರು: ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಾನುವಾರ ಶಾಸಕ ಎಂ.ಆರ್ ಮಂಜುನಾಥ್ ಅವರು ಮಗುವಿಗೆ ಲಸಿಕೆ ಹಾಕುವುದರ ಮೂಲಕ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಿದರು.
ಈ ವೇಳೆ ಅವರು ಮಾತನಾಡಿ, ಭಾರತ ಪೋಲಿಯೋ ಮುಕ್ತ ದೇಶವಾಗಿದೆ. ಅದರೂ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಪೋಲಿಯೋ ಲಸಿಕೆ ಕಡ್ಡಾಯವಾಗಿ ಹಾಕಿಸಿಬೇಕು. ಇದರಲ್ಲಿ ಪಾಲಕರು ಯಾವುದೇ ನಿರ್ಲಕ್ಷ್ಯ ಸಲ್ಲದು ಎಂದರು.
5 ವರ್ಷದೊಳಗಿನ ಯಾವುದೇ ಮಗು ಪೋಲಿಯೋ ಲಸಿಕೆಯಿಂದ ವಂಚಿತವಾಗಬಾರದು. ಈ ಬಗ್ಗೆ ಅಗತ್ಯ ಕ್ರಮವಹಿಸಿ ನಿರ್ದಿಷ್ಟ ಗುರಿಯನ್ನು ಸಾಸುವುದರ ಮೂಲಕ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.
ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಕಾರದ ಕಾರ್ಯದರ್ಶಿ ಎ.ಈ.ರಘು, ವೈದ್ಯೆ ಜಾಹ್ನವಿ, ಪಿಡಿಒ ಕಿರಣ್ ಹಾಗೂ ಇನ್ನಿತರರು ಇದ್ದರು.