ಜಿಲ್ಲೆ

ಶೃಂಗೇರಿ ಕ್ಷೇತ್ರದ ಅಭಿವೃದ್ಧಿಗೆ ಪ್ರಮಾಣಿಕ ಯತ್ನ

Chikkamagaluru

ಕೊಪ್ಪ: ಶೃಂಗೇರಿ ಕ್ಷೇತ್ರದಲ್ಲಿ ಇನ್ನಷ್ಟು ಅಭಿವೃದ್ಧಿ ಚಟುವಟಿಕೆ ನಡೆಸಲು ಸರ್ಕಾರದಿಂದ ಅನುದಾನ ತರಲು ಶ್ರಮಿಸಲಾಗುವುದು ಎಂದು ಮಾಜಿ ಶಾಸಕ ಡಿ.ಎನ್.ಜೀವರಾಜ್ ಹೇಳಿದರು.

ಪಕ್ಷ ಹಾಗೂ ಮುಖ್ಯಮಂತ್ರಿಗಳು ನನ್ನ ಮೇಲೆ ನಂಬಿಕೆ ಇಟ್ಟು ರಾಜಕೀಯ ಕಾರ್ಯದರ್ಶಿ ಸ್ಥಾನ ನೀಡಿದ್ದಾರೆ. ಇದನ್ನು ಸದ್ಬಳಕೆ ಮಾಡಿಕೊಂಡು ಕ್ಷೇತ್ರದ ಅಭಿವೃದ್ದಿಗೆ ಶ್ರಮಿಸಲಾಗುವುದು. ಎರಡು ದಿನದಲ್ಲಿ ಪಕ್ಷ, ಸಂಘ ಪರಿವಾರದ ಮುಖಂಡರನ್ನು ಸಂರ್ಪಸಿ ವಿಧಾನಸೌಧದಲ್ಲಿ ಅಧಿಕಾರ ಸ್ವೀಕರಿಸಲಾಗುವುದು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಶಾಸಕ ರಾಜೇಗೌಡ ಅವರು ಕ್ಷೇತ್ರದ ಅಭಿವೃದ್ಧಿಗೆ ಜೀವರಾಜ್ ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಪ್ರಚಾರ ಮಾಡುತ್ತಿದ್ದಾರೆ. ಮೂರು ವರ್ಷದಿಂದ ಶಾಸಕರ ನಿಧಿಗೆ ಆರು ಕೋಟಿ ರೂ. ಅನುದಾನ ಬಂದಿದ್ದು, ಶಾಸಕರ ನಿಧಿಯನ್ನು ಯಾವುದಕ್ಕೆ ಬಳಕೆ ಮಾಡಿಕೊಂಡಿದ್ದಾರೆ ಎಂದು ಆತ್ಮಾವಲೋಕನ ಮಾಡಿಕೊಳ್ಳಲಿ. ಬಡವರಿಗೆ ಉಪಯೋಗ ಆಗಬೇಕಾದ ಅನುದಾನ ಅವರ ಹಿಂಬಾಲಕರು, ಶ್ರೀಮಂತರ ಹಿತಾಸಕ್ತಿಗೆ ಬಳಕೆಯಾಗಿದೆ ಎಂದು ದೂರಿದರು.