ಜಿಲ್ಲೆ

ಕೈಗಾರಿಕೆ ಅಭಿವೃದ್ಧಿಯಿಂದ ಉದ್ಯೋಗ ಸೃಷ್ಟಿ

Shivamogga

ಸೊರಬ: ಯುವ ಪೀಳಿಗೆ ಸ್ಥಳೀಯವಾಗಿ ಉದ್ಯೋಗ ಪಡೆಯಬೇಕೆಂದರೆ ಕೈಗಾರಿಕೆಗಳನ್ನು ಅಭಿವೃದ್ಧಿಪಡಿಸುವುದು ಅಗತ್ಯ ಎಂದು ಶಾಸಕ ಕುಮಾರ್ ಬಂಗಾರಪ್ಪ ಹೇಳಿದರು.

ಪಟ್ಟಣದ ಹಿರೇಶಕುನ ಕೈಗಾರಿಕಾ ವಸಾಹತು ಕೇಂದ್ರದಲ್ಲಿ ಎಸ್​ಸಿಪಿ ಹಾಗೂ ಟಿಎಸ್​ಪಿ ಯೋಜನೆಯಡಿ 67.40 ಲಕ್ಷ ರೂ. ವೆಚ್ಚದಲ್ಲಿ ಮಳಿಗೆ ನಿರ್ಮಾಣ ಕಾಮಗಾರಿಗೆ ಬುಧವಾರ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

ತಾಲೂಕಿನ ಸಮಗ್ರ ಅಭಿವೃದ್ಧಿಗೆ ಅನುದಾನ ಬಿಡá-ಗಡೆಯಾಗಿದ್ದು ಪಟ್ಟಣದ ಕೈಗಾರಿಕೆಗಳ ವಸಾಹತು ಕೇಂದ್ರದಲ್ಲಿ ಎಸ್​ಸಿಪಿ ಹಾಗೂ ಟಿಎಸ್​ಪಿ ಯೋಜನೆಯಡಿ ಉತ್ತಮ ಮಳಿಗೆಗಳನ್ನು ನಿರ್ಮಾಣ ಮಾಡಲಾಗುತ್ತದೆ. ಇದರಿಂದ ವ್ಯಾಪಾರ-ವಹಿವಾಟು ನಡೆಸಲು ಅನುಕೂಲವಾಗಲಿದೆ. ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಮಾಡುವ ಮೂಲಕ ನಿಗದಿತ ಸಮಯಕ್ಕೆ ಕೆಲಸ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

ಪಪಂ ಅಧ್ಯಕ್ಷ ಎಂ.ಡಿ.ಉಮೇಶ್, ಉಪಾಧ್ಯಕ್ಷ ಮಧುರಾಯ್ ಶೇಟ್, ಸದಸ್ಯ ಪ್ರಭು ಮೇಸ್ತ್ರಿ, ನಟರಾಜ್, ಅನ್ಸರ್, ಗ್ರಾಪಂ ಮಾಜಿ ಉಪಾಧ್ಯಕ್ಷ ಕೃಷ್ಣಮೂರ್ತಿ ಕೊಡಕಣಿ, ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧಿಕಾರಿಗಳು ಇದ್ದರು.