ಮೈಸೂರು: ನಗರದ ನಡೆದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ವಕೀಲರೊಬ್ಬರು, ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಗರದ ದೇವರಾಜ ಮೊಹಲ್ಲಾದ ದೊಡ್ಡ ಒಕ್ಕಲಗೇರಿ ನಿವಾಸಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿ ಶಾಮಿಲಿ (24) ನೇಣಿಗೆ ಶರಣರಾಗಿದ್ದಾರೆ..ಅನೇಕ ದಿನಗಳಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದರು.
ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಲಷ್ಕರ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ರಾಜೀವ್ ನಗರದಲ್ಲಿ ವಕೀಲ ನಿಂಗರಾಜು(33) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಾರ್ಯ ನಿಮಿತ್ತ ಪತ್ನಿ ಮತ್ತು ಮಕ್ಕಳು ಹೊರಗೆ ತೆರಳಿದ್ದ ಸಂದರ್ಭದಲ್ಲಿ ಮನೆಯಲ್ಲಿ ಒಬ್ಬರೇ ಇದ್ದ ನಿಂಗರಾಜು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರ ತಂದೆ ಚಿಕ್ಕ ನಂಜಯ್ಯ ದೂರಿನ ಅನ್ವಯ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.