ಜಿಲ್ಲೆ

ಹೈಕೋರ್ಟ್ ಪೀಠದಲ್ಲಿ ವಕೀಲರ ದಿನಾಚರಣೆ

ವಿಜಯವಾಣಿ ಸುದ್ದಿಜಾಲ ಧಾರವಾಡ

ಧಾರವಾಡದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾಗಿ ಬಹುವರ್ಷಗಳು ಕಳೆದಿವೆ. ಈ ಭಾಗದ ವಕೀಲರು ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕವಾಗಬೇಕು ಎಂದು ಮಧ್ಯಪ್ರದೇಶ ಹೈಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ರವಿ ಮಳಿಮಠ ಆಶಯ ವ್ಯಕ್ತಪಡಿಸಿದರು.

ಇಲ್ಲಿನ ಹೈಕೋರ್ಟ್ ಸಭಾಂಗಣದಲ್ಲಿ ವಕೀಲರ ಸಂಘ ಶುಕ್ರವಾರ ಆಯೋಜಿಸಿದ್ದ ಸಂವಿಧಾನ ಮತ್ತು ವಕೀಲರ ದಿನಾಚರಣೆ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಧಾರವಾಡ ಹೈಕೋರ್ಟ್ ಪೀಠದ ಕ್ಷಿಪ್ರ ಬೆಳವಣಿಗೆ ಸಂತೋಷಕರ. ಈ ಭಾಗದ ವಕೀಲರ ಸಹಕಾರದಿಂದ ನ್ಯಾಯದಾನದಲ್ಲಿ ಮುಂಚೂಣಿಯಲ್ಲಿದೆ ಎಂದರು.

ಸAಘದ ಅಧ್ಯಕ್ಷ ವಿ.ಎಂ. ಶೀಲವಂತ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ನ್ಯಾಯಮೂರ್ತಿ ಶ್ರೀನಿವಾಸ ಹರೀಶಕುಮಾರ್, ಸಂಘದ ಪ್ರಧಾನ ಕಾರ್ಯದರ್ಶಿ ಆನಂದ ಕೊಳ್ಳಿ ಹಾಗೂ ಪದಾಽಕಾರಿಗಳಿದ್ದರು. ಆಡಳಿತ ಮಂಡಳಿ ಸದಸ್ಯ ಕೆ.ಎಸ್. ಕೋರಿಶೆಟ್ಟರ ಪರಿಚಯಿಸಿದರು. ದೀಪಾ ದೊಡ್ಡಟ್ಟಿ ನಿರೂಪಿಸಿದರು.