ಜಿಲ್ಲೆ

ವಕೀಲರ ಪ್ರತಿಭಟನೆ

ಮಂಜುನಾಥ ತಿಮ್ಮಯ್ಯ

ಮೈಸೂರು: ಕೋಲ್ಕತದಲ್ಲಿ ನಡೆದ ವೈದ್ಯಕೀಯ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು. ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ವಕೀಲರ ಸಂಘದ ಸದಸ್ಯರು ಗುರುವಾರ ಪ್ರತಿಭಟನೆ ನಡೆಸಿದರು.


ನ್ಯಾಯಾಲಯದ ಮುಂಭಾಗದ ಗಾಂಧಿ ಪುತ್ಥಳಿ ಬಳಿ ಜಮಾವಣೆಗೊಂಡ ವಕೀಲರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅತ್ಯಾಚಾರ ಮತ್ತು ಕೊಲೆಯ ವಿರುದ್ಧ ಈಗಾಗಲೇ ಜನರು ಬೀದಿಗಿಳಿದಿದ್ದಾರೆ.

ಈ ಘಟನೆಯ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯ ದಿಕ್ಕು ತಪ್ಪಿಸುವ ಹೀನ ಪ್ರಯತ್ನ ಆಡಳಿತಾರೂಢ ಟಿಎಂಸಿ ನಡೆಸುತ್ತಿದೆ. ಸರಿಯಾದ ದಾರಿಯಲ್ಲಿ ಮುನ್ನಡೆದು ಸಂಘಟಿತ ಹೋರಾಟ ಬೆಳೆಸುವುದರಿಂದ ಮಾತ್ರ ಸಮಸ್ಯೆಗೆ ಪರಿಹಾರ ಸಾಧ್ಯ ಎಂದರು.


ಅತ್ಯಾಚಾರದ ಅಪರಾಧಿಗಳನ್ನು ತಕ್ಷಣ ಬಂಧಿಸಿ, ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಬಿಹಾರದ ಮುಜಾಫರ್‌ಪುರ ಜಿಲ್ಲೆಯಲ್ಲಿ ದಲಿತ ಬಾಲಕಿ ಅಪಹರಿಸಿ, ಸಾಮೂಹಿಕ ಅತ್ಯಾಚಾರ ಮಾಡಿದ ಅಪರಾಧಿಗಳ ವಿರುದ್ಧ ಕಾನೂನು ಕ್ರಮ ಕೈಕೊಳ್ಳಬೇಕು

ಆರ್.ಜಿ.ಕರ್ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರನ್ನು ಕೆಲಸದಿಂದ ವಜಾ ಮಾಡಿ ವಿಚಾರಣೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.