ನಾಪೋಕ್ಲು ಸಮೀಪದ ಕಕ್ಕುಂದ ಕಾಡು ಶ್ರೀ ವೆಂಕಟೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶಿಲಾನ್ಯಾಸ ಕಾರ್ಯ ನಡೆಯಿತು. 
ಜಿಲ್ಲೆ

ವೆಂಕಟೇಶ್ವರ ದೇವಸ್ಥಾನ ಜೀರ್ಣೋದ್ಧಾರಕ್ಕೆ ಶಿಲಾನ್ಯಾಸ

ನಾಪೋಕ್ಲು: ಸಮೀಪದ ಕಕ್ಕುಂದ ಕಾಡು ಶ್ರೀ ವೆಂಕಟೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಶನಿವಾರ ಶಿಲಾನ್ಯಾಸ ನೆರವೇರಿಸಲಾಯಿತು.

ಉಡುಪಿಯ ಸದಾಶಿವ ಉಪಾಧ್ಯಾಯ, ಕಾರ್ಕಳದ ರೋಹಿತ ಹಾಗೂ ಅರ್ಚಕ ಸುಧೀರ್ ಕುಮಾರ ಮೂಲ ನಕ್ಷತ್ರ ಸಂಕಷ್ಟ ಚತುರ್ಥಿ ದಿನದಂದು ಪೂಜಾ ವಿಧಿ ವಿಧಾನಗಳೊಂದಿಗೆ ಶಿಲಾನ್ಯಾಸ ನೆರವೇರಿಸಿದರು.

ತೀರ್ಥರೂಪಿಣಿಯಾದ ಕಾವೇರಿ ನದಿ ಹರಿಯುವ ನಾಪೋಕ್ಲು ಸಮೀಪದ ಕಕ್ಕುಂದಕಾಡು ಎಂಬಲ್ಲಿ 25 ವರ್ಷಗಳ ಹಿಂದೆ ಸತ್ಯನಾರಾಯಣ ಪೂಜೆಯೊಂದಿಗೆ ಆರಂಭವಾದ ಈ ಕ್ಷೇತ್ರ ತದನಂತರ ಸಂಕೀರ್ಣವಾದ ಸ್ಥಳದಲ್ಲಿ ವೆಂಕಟೇಶ್ವರ, ಗಣಪತಿ ಹಾಗೂ ನವಗ್ರಹ ದೇವತೆಗಳ ಆರಾಧನೆ ನಡೆಯುತ್ತಿದೆ. ವಾಸ್ತು ತಜ್ಞ ಉಡುಪಿ ಗುಂಡಿಬೈಲು ಸುಬ್ರಮಣ್ಯ ಅವಧಾನಿಗಳನ್ನು ಕರೆಸಿ, ವಾಸ್ತು ವಿಮರ್ಶೆ ನಡೆಸಲಾಯಿತು. ದೇವಾಲಯ ಶಿಥಿಲಾವಸ್ಥೆಯಲ್ಲಿ ಇರುವ ಕಾರಣದಿಂದ ದೇವಾಲಯವನ್ನು ಮೂಲದಿಂದಲೇ ಬದಲಾವಣೆ ಮಾಡಬೇಕೆಂದು ಅವರು ತಿಳಿಸಿದ್ದು ದೇವಾಲಯದ ಜೀರ್ಣೋದ್ಧಾರ ಸಮಿತಿ ನೀಲಿನಕಾಶೆ ಸಿದ್ಧಪಡಿಸಿ ದೇವಾಲಯದ ಸಮಗ್ರ ಜೀರ್ಣೋದ್ಧಾರಕ್ಕೆ 2 ಕೋಟಿ ರೂ. ವೆಚ್ಚ ತಗಬಹುದು ಎಂದು ಅಂದಾಜಿಸಿದೆ. ಶಿಲಾಮಯ ಗರ್ಭಗುಡಿ, ತೀರ್ಥ ಮಂಟಪ, ತಾಮ್ರದ ಹೊದಿಕೆ, ನೈವೇದ್ಯ, ಗಣಪತಿ ದೇವರ ಗುಡಿ, ನಾಗದೇವರಿಗೆ ಪೂಜಾ ಸ್ಥಳ ನವಗ್ರಹ ದೇವತೆಗಳ ಸ್ಥಳ, ನೂತನ ದ್ವಜಸ್ಥಂಭ ಇತ್ಯಾದಿಗಳ ಯೋಜನೆಗಳೊಂದಿಗೆ ಪ್ರಾರಂಭಿಸುವ ಮಹತ್ಕಾರ್ಯಕ್ಕೆ ಜೀರ್ಣೋದ್ಧಾರ ಸಮಿತಿ ಸನ್ನದ್ಧವಾಗಿದ್ದು ಭಕ್ತರು ಸಹಕರಿಸುವಂತೆ ಸಮಿತಿ ಮನವಿ ಮಾಡಿದೆ.

ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಂ.ಪಿ ಗೋಪಾಲ, ಉಪಾಧ್ಯಕ್ಷ ಟಿ.ವಿ.ಭವಾನಿ, ಗೌರವಾಧ್ಯಕ್ಷ ದೇವಿ ಪ್ರಸಾದ, ಕಾರ್ಯದರ್ಶಿ ದಿವ್ಯಾ ಮಂದಪ್ಪ, ಖಜಾಂಚಿ ಟಿ.ಕೆ.ಸೂರ್ಯಕುಮಾರ್, ದೇವಸ್ಥಾನ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಟಿ.ಎನ್ ರಮೇಶ, ಕಾರ್ಯದರ್ಶಿ ಟಿ.ಎ.ಸಜಿಕುಮಾರ್, ಸಮಿತಿ ಸದಸ್ಯರಾದ ಸೀನಾ, ಮಾಧವ, ಮಂದಪ್ಪ, ಪ್ರಕಾಶ ಹಿರಿಯರಾದ ರಾಧಾಕೃಷ್ಣ, ಪುಟ್ಟಣ್ಣ ಹಾಗೂ ಊರಿನ ಸದಸ್ಯರು ಉಪಸ್ಥಿತರಿದ್ದರು.