ಕಾರಟಗಿ ತಾಲೂಕಿನ ಬರಗೂರಿನಲ್ಲಿ ಹಮ್ಮಿಕೊಂಡಿದ್ದ ಸಿದ್ದಾಪುರ ಕ್ಲಸ್ಟರ್ ಮಟ್ಟದ ಎಫ್.ಎಲ್.ಎನ್. ಕಲಿಕಾ ಹಬ್ಬ ಕಾರ್ಯಕ್ರಮವನ್ನು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲೂಕಾಧ್ಯಕ್ಷ ದೇವಪ್ಪ ಬಾವಿಕಟ್ಟಿ ಉದ್ಘಾಟಿಸಿದರು. ಗ್ರಾಪಂ ಅಧ್ಯಕ್ಷೆ ನಿರ್ಮಲಾ ಯಂಕಪ್ಪ ಜಾಲಿಹಾಳ, ಪ್ರಾಶಾಶಿ ಸಂಘದ ತಾಲೂಕಾಧ್ಯಕ್ಷ ವಿಠ್ಠಲ್ ಜೀರಗಾಳ, ಕರಾಸನೌ ಸಂಘದ ರಾಜ್ಯ ಕಾರ್ಯದರ್ಶಿ ಸರ್ದಾರ ಅಲಿ, ಎಸ್ಡಿಎಂಸಿ ಅಧ್ಯಕ್ಷೆ ಗಾಯತ್ರಿ, ಉಪಾಧ್ಯಕ್ಷ ತಿಪ್ಪಯ್ಯ, ಮುಖ್ಯಶಿಕ್ಷಕರಾದ ಚಂದ್ರಶೇಖರ, ಲೋಕೇಶ್ ನಾಯ್ಕ, ಸಂತೋಷ್, ಶಾಂತವ್ವ ಇತರರಿದ್ದರು. 
ಜಿಲ್ಲೆ

ಶೈಕ್ಷಣಿಕ ಪ್ರಗತಿಗೆ ಕಲಿಕಾ ಹಬ್ಬ ಪೂರಕ

ಗಾಯತ್ರಿ ಮಾಲಿಪಾಟೀಲ್

ಕಾರಟಗಿ: ಕಲಿಕಾ ಹಬ್ಬ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕಾಧ್ಯಕ್ಷ ದೇವಪ್ಪ ಬಾವಿಕಟ್ಟಿ ಹೇಳಿದರು.

ತಾಲೂಕಿನ ಬರಗೂರು ಸಹಿಪ್ರಾ ಶಾಲೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸಿದ್ದಾಪುರ ಕ್ಲಸ್ಟರ್ ಮಟ್ಟದ ಎಫ್.ಎಲ್.ಎನ್. ಕಲಿಕಾ ಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಲಿಕಾ ಹಬ್ಬ ಮಕ್ಕಳ ಕಲಿಕೆಗೆ ಪ್ರೇರಣೆಯಾಗಿದೆ. ನಾವು ಓದುವ ಸಮಯದಲ್ಲಿ ಇಂಥ ಸೌಲಭ್ಯಗಳು ಇರುತ್ತಿರಲಿಲ್ಲ. ಈಗ ಸರ್ಕಾರಿ ಶಾಲೆ ಅಭಿವೃದ್ಧಿಗೆ ಅನುಷ್ಠಾನ ಗೊಳಿಸುತ್ತಿರುವ ವಿವಿಧ ಕಾರ್ಯಕ್ರಮಗಳನ್ನು ಸದ್ಬಳಕೆ ಮಾಡಿಕೊಳ್ಳಿ ಎಂದರು.

ಸಿಆರ್‌ಪಿ ಅಜ್ಜಯ್ಯ ಮಾತನಾಡಿ, ಮಕ್ಕಳು ಶಾಲೆ ಹಾಗೂ ಗ್ರಾಮದ ಕೀರ್ತಿ ಹೆಚ್ಚಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಬೇಕು. ವಿದ್ಯಾರ್ಥಿಗಳು ಯಾವ ವಿಷಯದಲ್ಲಿ ಆಸಕ್ತಿ ಹೊಂದಿದ್ದಾರೆ ಎಂದು ತಿಳಿದುಕೊಳ್ಳಲು ಇಂಥ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದು ತಿಳಿಸಿದರು.

ಗಟ್ಟಿ ಓದು, ಕಥೆ ಹೇಳುವುದು, ಕೈಬರಹ ಮತ್ತು ಕ್ಯಾಲಿಗ್ರಫಿ, ಸಂತೋಷದಾಯಕ ಗಣಿತ, ರಸಪ್ರಶ್ನೆ ಹಾಗೂ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

ಗ್ರಾಪಂ ಅಧ್ಯಕ್ಷೆ ನಿರ್ಮಲಾ ಯಂಕಪ್ಪ ಜಾಲಿಹಾಳ, ಪ್ರಾ.ಶಾ.ಶಿ. ಸಂಘದ ತಾಲೂಕಾಧ್ಯಕ್ಷ ವಿಠ್ಠಲ್ ಜೀರಗಾಳ, ಕರಾಸನೌ ಸಂಘದ ರಾಜ್ಯ ಕಾರ್ಯದರ್ಶಿ ಸರ್ದಾರ ಅಲಿ, ಎಸ್ಡಿಎಂಸಿ ಅಧ್ಯಕ್ಷೆ ಗಾಯತ್ರಿ, ಉಪಾಧ್ಯಕ್ಷ ತಿಪ್ಪಯ್ಯ, ಮುಖ್ಯಶಿಕ್ಷಕರಾದ ಚಂದ್ರಶೇಖರ, ಲೋಕೇಶ್ ನಾಯ್ಕ, ಸಂತೋಷ್, ಶಾಂತವ್ವ, ಶಿಕ್ಷಕಿ ಸುಮಾ ನಾಯ್ಕ ಇತರರಿದ್ದರು.