ಲೆದರ್ ಬಾಲ್ ಕ್ರಿಕೆಟ್ ಪಂದ್ಯಾಟದ ಆಮಂತ್ರಣ ಬಿಡುಗಡೆ ಮಾಡಲಾಯಿತು.  
ಜಿಲ್ಲೆ

21ರಿಂದ ಲೆದರ್ ಬಾಲ್ ಕ್ರಿಕೆಟ್ ಟೂರ್ನಿ

Karthika K.S

ಬೈಂದೂರು: ಇಲ್ಲಿನ ವಿಕ್ರಮ ಕ್ರಿಕೆಟ್ ಕ್ಲಬ್ ಆಶ್ರಯದಲ್ಲಿ ಉಡುಪಿ ಜಿಲ್ಲಾ ಕ್ರಿಕೆಟ್ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ಜಿಲ್ಲೆಯ ಇಂಟರ್ ಕ್ಯಾಂಪಸ್ ಅಕಾಡೆಮಿ ಆಟಗಾರರಿಗಾಗಿ ಜಿಲ್ಲೆಯಲ್ಲಿಯೇ ಇದೇ ಮೊದಲ ಬಾರಿಗೆ ಅಂಡರ್ 19 ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿ ‘ವಿಕ್ರಂ ಟ್ರೋಫಿ-2025’ ಏ.21ರಿಂದ 27ರವರೆಗೆ ಬೈಂದೂರಿನ ಗಾಂಧಿ ಮೈದಾನದಲ್ಲಿ ನಡೆಯಲಿದೆ ಎಂದು ಕ್ಲಬ್ ಗೌರವಾಧ್ಯಕ್ಷ ನಾಕಟ್ಟೆ ನಾಗರಾಜ ಶೆಟ್ಟಿ ತಿಳಿಸಿರು.

ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಂಗಳೂರು ವಿಭಾಗದಿಂದ 8 ತಂಡಗಳು ಭಾಗವಹಿಸಲಿದ್ದು, ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡ ಕ್ರಿಕೆಟಿಗರು ಪಂದ್ಯಾವಲಿ ವೀಕ್ಷಿಸಿ ಪ್ರತಿಭಾವಂತ ಕ್ರಿಕೆಟಿಗರನ್ನು ಗುರತಿಸಲಿದ್ದಾರೆ ಎಂದರು.

ಪಂದ್ಯಾವಳಿಯ ಆಮಂತ್ರಣ ಪತ್ರ ಬಿಡುಗಡೆ ಮಾಡಲಾಯಿತು. ಕ್ಲಬ್ ಅಧ್ಯಕ್ಷ ದಿನೇಶ ಗಾಣಿಗ, ಗೌರವ ಸಲಹೆಗಾರ ಜಯಾನಂದ ಹೋಬಳಿದಾರ್, ಕಾರ್ಯದರ್ಶಿ ರಾಜೇಶ್ ಆಚಾರ್, ಸದಸ್ಯ ಗಣೇಶ ಉಪಸ್ಥಿತರಿದ್ದರು.