ಜಿಲ್ಲೆ

ಉಪನ್ಯಾಸ, ಸಂಗೀತ- ನೃತ್ಯ ಕಾರ್ಯಕ್ರಮ

ಮಂಜುನಾಥ ಅಂಗಡಿ

ಧಾರವಾಡ: ನಗರದ ಡಾ. ದ.ರಾ. ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ವತಿಯಿಂದ ಅ. 5ರಂದು ಸಂಜೆ 5 ಗಂಟೆಗೆ ಇಲ್ಲಿನ ಸಾಧನಕೇರಿಯ ಡಾ. ದ.ರಾ. ಬೇಂದ್ರೆ ಭವನದಲ್ಲಿ ವಿಶೇಷ ಉಪನ್ಯಾಸ, ಸಂಗೀತ ಮತ್ತು ನೃತ್ಯ ಕಾರ್ಯಕ್ರಮ ಆಯೋಜಿಸಲಾಗಿದೆ. ಸಾಹಿತಿ ಡಾ. ಕೃಷ್ಣ ಕಟ್ಟಿ `ಬೇಂದ್ರೆಯವರ ಕಾವ್ಯದಲ್ಲಿ ಮಾತೃಕೆಯರು' ವಿಷಯ ಕುರಿತು ವಿಶೇಷ ಉಪನ್ಯಾಸ ನೀಡುವರು. ಟ್ರಸ್ಟ್ ಅಧ್ಯಕ್ಷ ಡಾ. ಸರಜೂ ಕಾಟ್ಕರ್ ಅಧ್ಯಕ್ಷತೆ ವಹಿಸುವರು. ನಾದಸುರಭಿ ಸಾಂಸ್ಕೃತಿಕ ಅಕಾಡೆಮಿಯ ಡಾ. ಜ್ಯೋತಿ ಲಕ್ಷ್ಮೀ ಕೂಡ್ಲಿಗಿ ಮತ್ತು ವೃಂದದವರು ಬೇಂದ್ರೆ ಗೀತೆಗಳ ಗಾಯನ ಪ್ರಸ್ತುತಪಡಿಸುವರು. ಭರತ ನೃತ್ಯ ಅಕಾಡೆಮಿಯ ವಿದ್ವಾನ್ ರಾಜೇಂದ್ರ ಟೊಣಪಿ ಮತ್ತು ತಂಡ ಬೇಂದ್ರೆಯವರ ಗೀತೆಗಳಿಗೆ ನೃತ್ಯ ಕಾರ್ಯಕ್ರಮ ನೀಡಲಿದೆ ಎಂದು ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಸದಸ್ಯ ಕಾರ್ಯದರ್ಶಿ ಕುಮಾರ ಬೆಕ್ಕೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.