ಕುಂದಾಪುರ: ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಸಿಬ್ಬಂದಿ ಅಭಿವೃದ್ಧಿ ಸಮಿತಿ ವತಿಯಿಂದ ಕಾರ್ಯಕ್ಷೇತ್ರದಲ್ಲಿ ಒತ್ತಡ ನಿವಾರಣೆ ಮತ್ತು ಕೆಲಸ-ಜೀವನ ಸಮತೋಲನ ಎಂಬ ವಿಷಯದ ಮೇಲೆ ವಿಶೇಷ ಅತಿಥಿ ಉಪನ್ಯಾಸ ಕಾರ್ಯಕ್ರಮ ಕಾಲೇಜು ಆವರಣದಲ್ಲಿ ಗುರುವಾರ ನಡೆಯಿತು.
ಸಂಪನ್ಮೂಲ ವ್ಯಕ್ತಿ, ಉಡುಪಿ ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆಯ ಆಡಳಿತಾಧಿಕಾರಿ ಸೌಜನ್ಯಾ ಶೆಟ್ಟಿ, ಉದ್ಯೋಗ ಸ್ಥಳದಲ್ಲಿ ಒತ್ತಡ ಕಡಿಮೆ ಮಾಡುವ ಪ್ರಾಯೋಗಿಕ ವಿಧಾನಗಳು ಮತ್ತು ಕೆಲಸ-ಜೀವನ ಸಮತೋಲನ ಸಾಧಿಸುವ ತಂತ್ರಗಳನ್ನು ಕುರಿತು ಬೆಳಕು ಚೆಲ್ಲಿದರು. ಸ್ವಯಂ ಆರೈಕೆ, ಸಮಯ ನಿರ್ವಹಣೆ ಮತ್ತು ಸಕಾರಾತ್ಮಕ ಕೆಲಸದ ವಾತಾವರಣದ ಮಹತ್ವ ವಿವರಿಸಿದರು.
ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಪ್ರೊ.ಜೆನ್ನಿಫರ್ ಫ್ರೀಡಾ ಮೆನೆಜಸ್, ಉಪಪ್ರಾಂಶುಪಾಲೆ ರೂಪಶ್ರೀ ಕೆ.ಎಸ್., ಐಎಂಜೆ ಅಲೈಡ್ ಹೆಲ್ತ್ ಸೈನ್ಸಸ್ ಹಾಗೂ ಮೂಡಲಕಟ್ಟೆ ಕಾಲೇಜ್ ಆಫ್ ಫಿಸಿಯೋಥೆರಪಿ ಡೀನ್ ಡಾ.ಪ್ರೊ.ಪದ್ಮಚರಣ ಸ್ವೈನ್ ಇದ್ದರು. ಉಪನ್ಯಾಸಕಿ ಕೀರ್ತನಾ ನಿರೂಪಿಸಿದರು.